
ಬೆಂಗಳೂರು, 08 ಜನವರಿ (ಹಿ.ಸ.) :
ಆ್ಯಂಕರ್ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ಪರಿಚಯಿಸಿದ ರಾಕಿಂಗ್ ಸ್ಟಾರ್ ಯಶ್ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ‘ಕೆಜಿಎಫ್’ ಸರಣಿಯಂತಹ ಯಶಸ್ವಿ ಚಿತ್ರಗಳ ಮೂಲಕ ಕನ್ನಡ ಸಿನಿರಂಗದ ಕೀರ್ತಿ ಪತಾಕೆಯನ್ನು ಗಡಿಯಾಚೆಗೆ ಹಾರಿಸಿದ ಅವರು, ತಮ್ಮ ವಿಭಿನ್ನ ಅಭಿನಯ ಶೈಲಿ ಮತ್ತು ಕಠಿಣ ಪರಿಶ್ರಮದಿಂದ ದೇಶವ್ಯಾಪಿ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ.
ಸಿನಿಮಾ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿಯೂ ಸಕ್ರಿಯರಾಗಿರುವ ಯಶ್, ತಮ್ಮ ಯಶೋಮಾರ್ಗ ಫೌಂಡೇಶನ್ ಮೂಲಕ ಶಿಕ್ಷಣ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಗಳಿಗೆ ನೆರವು ನೀಡುತ್ತಿದ್ದಾರೆ.
ಪ್ರತಿಭಾವಂತ ನಟನಾಗಿಯಷ್ಟೇ ಅಲ್ಲ, ಸಹೃದಯ ಮಾನವೀಯ ಮುಖದಿಂದಲೂ ಗುರುತಿಸಿಕೊಂಡಿರುವ ಯಶ್ ಅವರಿಗೆ ಸಿನಿರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಅಭಿಮಾನಿಗಳಿಂದ ಹಾರೈಕೆಗಳ ಮಹಾಪೂರ ಹರಿದು ಬರುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa