
ಗದಗ, 08 ಜನವರಿ (ಹಿ.ಸ.) :
ಆ್ಯಂಕರ್ : ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ನಿಮಿತ್ಯ ಪೂರ್ವಸಿದ್ಧತಾ ಸಭೆಯು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಜನೆವರಿ 14 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸಮುದಾಯದ ವತಿಯಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆಗೆ ಕ್ರಮ ವಹಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಮಾತನಾಡಿ ಜಿಲ್ಲೆಯ ತಾಲೂಕು, ಗ್ರಾ. ಪಂ. ಮಟ್ಟದಲ್ಲಿಯೂ ಸಹ ಜಯಂತಿ ಆಚರಣೆಗೆ ಕ್ರಮ ವಹಿಸಲು ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯರು, ಗಣ್ಯರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP