
ಶಿವಮೊಗ್ಗ, 09 ಜನವರಿ (ಹಿ.ಸ.) :
ಆ್ಯಂಕರ್ : ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ಶೃಂಗೇರಿ ಶಾರದಾ ಪೀಠಂ ಇವರು ಸಶಸ್ತ್ರಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರ ಮಕ್ಕಳಿಗೆ 2026-28ನೇ ಶೈಕ್ಷಣಿಕ ವರ್ಷದಲ್ಲಿ ಕೆಲವು ಷರತ್ತುಗಳೊಂದಿಗೆ ಶಿಷ್ಯವೇತನವನ್ನೊಳಗೊಂಡ ಸ್ನಾತಕೋತ್ತರ ಪದವಿ ಡಿಪ್ಲೋಮ ಇನ್ ಮೇನೇಜೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂ ವ್ಯಾಸಂಗಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9218084965/66 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa