ಮಹಿಳೆಯ ಮೇಲಿನ ದೌರ್ಜನ್ಯ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿ, 09 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸ್ಟೇಷನ್ ರಸ್ತೆಯಲ್ಲಿರುವ ಡಾ. ಬಿ.
Protest


ಹುಬ್ಬಳ್ಳಿ, 09 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸ್ಟೇಷನ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜರುಗಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಮಹಿಳೆಯರ ಭದ್ರತೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳಿಗೆ ಕುಮ್ಮಕ್ಕು ನೀಡುವ ನೀತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದ್ದು, ಇಂತಹ ದುರಾಡಳಿತವನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಮಾಜಿ ಶಾಸಕರಾದ ಅಶೋಕ ಕಾಟವೆ, ಶ್ರೀಮತಿ ಸೀಮಾ ಮಸೂತಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande