
ಮಂಗಳೂರು, 09 ಜನವರಿ (ಹಿ.ಸ.) :
ಆ್ಯಂಕರ್ : ಮಂಗಳೂರಿನ ಲಾಲ್‌ಬಾಗ್ ಪ್ರದೇಶದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೂತನ ವಸತಿ ಗೃಹ ನಿರ್ಮಾಣಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭೂಮಿ ಪೂಜೆ ನೆರವೇರಿಸಿ ಶಂಕುಸ್ಥಾಪನೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸಚಿವರೊಂದಿಗೆ ಭಾಗವಹಿಸಿ, ಅರಣ್ಯ ಇಲಾಖೆಯ ನೂತನ ಮೂಲಸೌಕರ್ಯ ಅಭಿವೃದ್ಧಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅಧಿಕಾರಿಗಳಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು. ಮಂಗಳೂರು ವಿಭಾಗದಲ್ಲಿ ಅರಣ್ಯ ಇಲಾಖೆಯನ್ನು ಇನ್ನಷ್ಟು ಬಲಪಡಿಸಿ, ಸುಸಜ್ಜಿತವಾಗಿ ಕಾರ್ಯನಿರ್ವಹಿಸಲು ಈ ನೂತನ ಕಟ್ಟಡ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಜನಪರ ಯೋಜನೆಗಳಿಗೆ ಸರ್ಕಾರ ಸದಾ ಬದ್ಧವಾಗಿದೆ ಎಂದರು.
ಭೂಮಿ ಪೂಜೆ ಸಮಾರಂಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಹಾಗೂ ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ್ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa