
ಬೆಂಗಳೂರು, 09 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬೀದರ್ ಹಾಗೂ ಉತ್ತರ ಕನ್ನಡ ಜಿಲ್ಲಾ ಘಟಕಗಳ ಜಿಲ್ಲಾಶಃ ವಿಶೇಷ ಸಭೆ ನಡೆಸಿದರು.
ಸಭೆಯಲ್ಲಿ ಪಕ್ಷ ಸಂಘಟನೆಯ ಬಲವರ್ಧನೆ, ಮುಂಬರುವ ರಾಜಕೀಯ ಸವಾಲುಗಳು, ಜನಸಂಪರ್ಕ ವಿಸ್ತರಣೆ ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಯಿತು. ಕಾರ್ಯಕರ್ತರ ಸಕ್ರಿಯ ಪಾತ್ರ ಮತ್ತು ಸಂಘಟನಾತ್ಮಕ ಶಿಸ್ತು ಕಾಪಾಡಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಡಿ. ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರು, ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದು, ಸಭೆಗೆ ಮಾರ್ಗದರ್ಶನ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa