ಸೇಡಂನಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ; ಸಚಿವ ಶರಣ ಪ್ರಕಾಶ ಪಾಟೀಲರಿಂದ ಅಧಿಕಾರಿಗಳ ಸಭೆ
ಸೇಡಂ, 09 ಜನವರಿ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಸೇಡಂ ನಗರಕ್ಕೆ ಮುಖ್ಯಮಂತ್ರಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಉದ್ಘಾಟನೆಗಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಶರಣ ಪ್ರಕಾಶ ಪಾಟೀಲ ಇಂದು ತಾಲೂಕಾಡಳಿತ ಸೌಧದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿ
Meeting


ಸೇಡಂ, 09 ಜನವರಿ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಸೇಡಂ ನಗರಕ್ಕೆ ಮುಖ್ಯಮಂತ್ರಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ ಉದ್ಘಾಟನೆಗಾಗಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಶರಣ ಪ್ರಕಾಶ ಪಾಟೀಲ ಇಂದು ತಾಲೂಕಾಡಳಿತ ಸೌಧದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದರು.

ಸಭೆಯಲ್ಲಿ ಇಲಾಖೆಗಳ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಗಳನ್ನು ಸಮನ್ವಯತೆಯಿಂದ ನಿರ್ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಂತೆ ಸಚಿವರು ಸೂಚಿಸಿದರು.

ಜನವರಿ 12 ರಂದು ಸೇಡಂ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ಸಾರ್ವಜನಿಕ ಸಮಾವೇಶಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂದೋಬಸ್ತ್, ವೇದಿಕೆ ಸಿದ್ಧತೆ, ವಿದ್ಯುತ್ ಸಂಪರ್ಕ, ವಿಐಪಿ ಪ್ರೋಟೋಕಾಲ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳ ಮೇಲೆ ವಿಶೇಷ ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.

ಸಮಾವೇಶದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯನ್ನು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು. ಜೊತೆಗೆ ಸಾರ್ವಜನಿಕರಿಗೆ ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಕಲಬುರಗಿ ಜಿಲ್ಲಾ ಅಪರ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು, ತಹಶಿಲ್ದಾರರು, ಡಿವೈಎಸ್ಪಿ ಸೇರಿದಂತೆ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande