
ಮಂಡ್ಯ, 09 ಜನವರಿ (ಹಿ.ಸ.) :
ಆ್ಯಂಕರ್ : ಮಂಡ್ಯದಲ್ಲಿ ಇಂದು ಹಮ್ಮಿಕೊಳ್ಳಲಾದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಹಕರಲ್ಲಿ ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಮೂಡಿಸುವುದರ ಜೊತೆಗೆ ಅವರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರ ಮಾತ್ರವಲ್ಲ, ಸಮಾಜದ ಎಲ್ಲ ವರ್ಗಗಳ ಹೊಣೆಯಾಗಿದೆ ಎಂದು ಹೇಳಿದರು. ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗುವುದರೊಂದಿಗೆ, ತಮ್ಮ ಜವಾಬ್ದಾರಿಗಳನ್ನು ಸಹ ಅರಿತುಕೊಳ್ಳುವುದು ಅತ್ಯಗತ್ಯವಾಗಿದೆ ಎಂದರು.
ಗ್ರಾಹಕರ ಹಕ್ಕುಗಳ ರಕ್ಷಣೆ ಮತ್ತು ನ್ಯಾಯಸಮ್ಮತ ವ್ಯಾಪಾರ ವ್ಯವಸ್ಥೆ ನಿರ್ಮಾಣಕ್ಕೆ ಇಂತಹ ಜಾಗೃತಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಸಚಿವರು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa