
ಧಾರವಾಡ, 09 ಜನವರಿ (ಹಿ.ಸ.) :
ಆ್ಯಂಕರ್ : ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸುವ ಕುರಿತು ಮಾರ್ಗಸೂಚಿಗಳೊಂದಿಗೆ ಉಪ ನೋಂದಣಿ ಕಚೇರಿಗಳಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ನೀಡುವಂತೆ ಸೂಚಿಸಿದ್ದು, ಧಾರವಾಡ ಜಿಲ್ಲೆಯಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಛೇರಿಗಳಲ್ಲಿ ಜನವರಿ 14 ರ ವರೆಗೆ ತರಬೇತಿ ಆಯೋಜಿಸಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಮೂಲಕ ಇ-ಸ್ಟ್ಯಾಂಪ್ ವಿತರಿಸುವ ಸಹಕಾರಿ ಸೌಹಾರ್ದಗಳ ಸಿಬ್ಬಂದಿ ವರ್ಗದವರಿಗೆ ಮತ್ತು ಆಸಕ್ತ ಸಾರ್ವಜನಿಕರಿಗೆ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆಯಬೇಕೆಂದು ಧಾರವಾಡ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಮುದ್ರಾಂಕಗಳ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa