
ಗದಗ, 09 ಜನವರಿ (ಹಿ.ಸ.) :
ಆ್ಯಂಕರ್ : ತಾಯಿಗಿಂತ ಮೀಗಿಲು ಯಾರೂ ಇಲ್ಲ. ತಂದೆ-ತಾಯಿಯೇ ದೇವರು. ಮಾತು ಬಾರದ ಮಗುವಿಗೆ, ಮಾತು ಕಲಿಸುವವಳು ಅವ್ವ. ಪ್ರತಿಯೊಬ್ಬರು ಬದುಕಿನಲ್ಲಿ ತಂದೆ ತಾಯಿಯ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.
ಲಿಂಗಾಯತ ಪ್ರಗತಿಶೀಲ ಸಂಘದ 2779 ನೆಯ ಶಿವಾನುಭವದಲ್ಲಿ ಮಾತನಾಡಿದ ಶ್ರೀಗಳು, ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ ಎಂಬ ಮಾತು ಸತ್ಯ. ಕೆಟ್ಟ ಮಕ್ಕಳು ಹುಟ್ಟಬಹುದು, ಕೆಟ್ಟ ತಾಯಿ ಇರಲಾರಳು. ಮಕ್ಕಳ ಲಾಲನೆ ಪಾಲನೆ ಮಾಡುವ ಮೂಲಕ ಮನೆಯ ಎಲ್ಲಾ ಜವಾಬ್ದಾರಿಗಳನ್ನು ಅವ್ವ ಹೊರುತ್ತಾಳೆ. ಮಕ್ಕಳಲ್ಲಿ ಬೇಧಭಾವ ಮಾಡದೇ ಸಮಾನವಾಗಿ ಬೆಳೆಸುವ ಅವ್ವ ಮಕ್ಕಳ ಪಾಲಿನ ದೇವರು ಎಂದು ಅವ್ವನ ಕುರಿತು ಮಾತನಾಡುತ್ತ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವ್ವನ ಋಣವನ್ನು ಅವ್ವ ಸೇವಾ ಟ್ರಸ್ಟ್ ಮೂಲಕ ತೀರಿಸುತ್ತಿರುವುದು ಸಮಾಜಕ್ಕೆ ಮಾದರಿ ಎಂದರು.
ಉಪನ್ಯಾಸಕರಾಗಿ ಆಗಮಿಸಿದ ಹುಬ್ಬಳ್ಳಿಯ ಎಸ್ ಜೆ ಎಂ ಕಾಲೇಜಿನ ಡಾ ಸುಪ್ರಿಯಾ ಮಲಶೆಟ್ಟಿ ಮಾತನಾಡಿ, ಅವ್ವ ಈ ವಿಷಯ ಕುರಿತು ಉಪನ್ಯಾಸ ಮಾಡುತ್ತಾ, ಸಾವಿರಾರು ತಂದೆಗಿಂತ ಒಬ್ಬ ತಾಯಿ ಶ್ರೇಷ್ಠ. ಸಕಲರಿಗೂ ಪೂಜ್ಯನೀಯ ತಾಯಿ. ಅವ್ವ ಬದುಕು ನೀಡುವುದರ ಜೊತೆಗೆ ಬದುಕುವ ಕಲೆಯನ್ನು ಕಲಿಸುತ್ತಾಳೆ. ಅವ್ವಳ ಪ್ರೀತಿಯಲ್ಲಿ ಅಪೇಕ್ಷೆ ಇಲ್ಲ. ಮಕ್ಕಳಿಗೋಸ್ಕರ ಏನು ಬೇಕಾದರೂ ಮಾಡುವಳು. ಜೀವನದ ಪಾಠ ಕಲಿಸುತ್ತಾಳೆ.
ತಾಯಿಯ ಶ್ರದ್ಧೇ ಸಹನೆ ಪ್ರಾಮಾಣಿಕತೆ ಪ್ರೀತಿ ವರ್ಣಿಸಲಸಾಧ್ಯ. ಮನೆಯೇ ಮೊದಲು ಪಾಠ ಶಾಲೆ, ಜನನಿ ತಾನೆ ಗುರು. ನಮ್ಮ ಬದುಕಿನ ನಕ್ಷೆಯೇ ಅವ್ವ. ಬಸವಣ್ಣನವರ ವಚನಗಳು ಅವ್ವನ ಸೆರಗು ಇದ್ದಂತೆ. ಮನೆ ಎಂದರೆ ಮನಸ್ಸು ನೆಮ್ಮದಿಯಿಂದ ಇರುವುದು. ಗೋಡೆಗಳಿಂದ ಮನೆ ಕಟ್ಟಿದರೆ, ಅವ್ವ ಪ್ರೀತಿಯಿಂದ ಎಲ್ಲರ ಮನವನ್ನು ಕಟ್ಟುವಳು ಎಂದು ಮಾತನಾಡಿದರು.
ಎಲ್ ಎಲ್ ಎಂ ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸಹನಾ ಅನಂತ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು. ಸನ್ಮಾನೋತ್ತರವಾಗಿ ಮಾತನಾಡಿದ ಸಹನಾ ಅನಂತ ಕಾರ್ಕಳ, ಮಕ್ಕಳ ಜೀವನದಲ್ಲಿ ಅವ್ವ ಅಪ್ಪನ ಪಾತ್ರ ಬಹು ದೊಡ್ಡದು. ಆದರೆ ಸಹನಾ ನನ್ನ ಹೆಸರು ನನ್ನ ಹೆಸರಿನ ಮುಂದೆ ಅನಂತ ಹಚ್ಚುತ್ತಾರೆ ಮಂಗಳಾ ಎಂದು ಬರುವುದಿಲ್ಲ. ಏಕೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿದೆ ಎಂದು ತಾಯಿಯ ಶ್ರೇಷ್ಠತೆ ಕುರಿತು ಮಾತನಾಡಿದರು.
ಅತಿಥಿಗಳಾಗಿ ಆಗಮಿಸಿದ ಗದುಗಿನ ಅವ್ವ ಸೇವಾ ಟ್ರಸ್ಟ್‍ನ ಸಂಚಾಲಕರಾದ ಡಾ.ಬಸವರಾಜ ಧಾರವಾಡ ಮಾತನಾಡಿ, ಮಾನ್ಯ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಲಿಂ. ಜಗದ್ಗುರು ಸಿದ್ದಲಿಂಗ ಮಹಾಸ್ವಾಮಿಗಳ ಅಮೃತ ಹಸ್ತದಿಂದ 2011 ರಲ್ಲಿ ಉದ್ಘಾಟನೆ ಯಾದ ಅವ್ವ ಸೇವಾ ಟ್ರಸ್ಟ್ ಹತ್ತು ಹಲವಾರು ವಿಧಾಯಕ ಕಾರ್ಯಕ್ರಮಗಳನ್ನು ಹಾಕಿಕೊಂಡು ದೀನದಲಿತರಿಗೆ ದಿವ್ಯಾಂಗರಿಗೆ, ಮಹಿಳೆಯರಿಗೆ ಶಾಲಾ ವಿದ್ಯಾರ್ಥಿಗಳಿಗೆ, ವಿಶೇಷ ಸಾಧನೆ ಮಾಡಿದ ಪುರುಷರಿಗೆ, ಮಹಿಳೆಯರಿಗೆ, ಪೌರಕಾರ್ಮಿಕರಿಗೆ ,ಅಂಧರಿಗೆ ಅನಾಥರಿಗೆ, ಗೌರವ ಸಲ್ಲಿಸುತ್ತ ಪ್ರಾರಂಭದಿಂದ ಇಲ್ಲಿಯವರೆಗೆ ಬಂದಿದೆ. ಅವ್ವ ಶಬ್ದದಲ್ಲಿ ಏನೋ ಒಂದು ವಿಶಿಷ್ಟತೆಯನ್ನು ಕಂಡು, ಅವ್ವನ ನೆನಪು ಹಸಿರಾಗಿರುವಂತೆ ಅವ್ವ ಸೇವಾ ಟ್ರಸ್ಟ್ ಸ್ಥಾಪಿಸಿ, ಅಪ್ರತಿಮ ಸಾಧನೆ ಮಾಡಿದವರಿಗೆ ಅವ್ವ ಪ್ರಶಸ್ತಿಯನ್ನು ನೀಡುತ್ತಲಿದೆ.
ಶ್ರೀಮಠವು ಶಿವಾನುಭವದ ಮೂಲಕ ಉತ್ತಮ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಪ್ರಶಂಸಿಸುವುದರ ಜೊತೆಗೆ ಟ್ರಸ್ಟ್‍ನ ಧ್ಯೇಯೋದ್ದೇಶಗಳನ್ನು ತಿಳಿಸಿದರು.
ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟನ ಕಾರ್ಯದರ್ಶಿಗಳಾದ ಶಶಿ ಸಾಲಿ ಮಾತನಾಡಿ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರಿಗೆ ತಾಯಿಯ ಬಗ್ಗೆ ಅಪಾರವಾದ ಪ್ರೀತಿ ಇದ್ದುದರಿಂದ ಅವ್ವನ ನೆನಪು ಸದಾ ಇರಲೆಂದು ಅವ್ವ ಸೇವಾ ಟ್ರಸ್ಟ್ ಸ್ಥಾಪಿಸಿ ಅನೇಕ ಸಮಾಜಮುಖಿ ಕೆಲಸವನ್ನು ಮಾಡುತ್ತಾ ಬಂದಿದೆ ಎಂದರು.
ಅತಿಥಿಗಳಾಗಿ ಆಗಮಿಸಿದ ಎಸ್ ಎಸ್ ಪಾಟೀಲ ಮಾಜಿ ಸಹಕಾರ ಸಚಿವರು, ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಲಿಂಗರಾಜ ಅಂಗಡಿ ಅಧ್ಯಕ್ಷರು ಕ.ಸಾ.ಪ ಧಾರವಾಡ, ಮಾಧ್ಯಮ ಪ್ರತಿನಿಧಿಗಳಾದ ಅನಂತ ಕಾರ್ಕಳ ಉಪಸ್ಥಿತರಿದ್ದರು.
ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಹಿಳಾ ಪೌರ ಕಾರ್ಮಿಕರಿಗೆ ಗೌರವ ಸಮರ್ಪಣೆಯನ್ನು ಗದಗ ಅವ್ವ ಸೇವಾ ಟ್ರಸ್ಟ್ ಸಂಚಾಲಕರಾದ ಡಾ ಬಸವರಾಜ ಧಾರವಾಡರವರು ಮಾಡಿದರು. ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ವಚನಸಂಗೀತ ನೆಡೆಸಿಕೊಟ್ಟರು. ಧಾರ್ಮಿಕ ಗ್ರಂಥಪಠಣವನ್ನು ಅವನಿ ಎಂ ಪುಣೇಕರ, ವಚನಚಿಂತನವನ್ನು ಶ್ರೇಯಾ ಡಿ ವಿಠ್ಠಲ್ಕರ ನೆಡೆಸಿಕೊಟ್ಟರು. ದಾಸೋಹ ಸೇವೆಯನ್ನು ಜಗದ್ಗುರು ತೋಂಟದಾರ್ಯ ಶಿಕ್ಷಣ ಸಂಸ್ಥೆಗಳ ನೌಕರರ ಪತ್ತಿನ ಸಹಕಾರ ಸಂಘ ನಿ ಗದಗ ಹಾಗೂ ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಇವರು ವಹಿಸಿದ್ದರು.
ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷ ಡಾ ಉಮೇಶ ಪುರದ ಹಾಗೂ ವಿದ್ಯಾ ಪ್ರಭು ಗಂಜಿಹಾಳ ಕಾರ್ಯದರ್ಶಿ ವೀರಣ್ಣ ಗೋಟಡಕಿ ಸಹಕಾರ್ಯದರ್ಶಿ ಸೋಮಶೇಖರ ಪುರಾಣಿಕ ಹಾಗೂ ನಾಗರಾಜ್ ಹಿರೇಮಠ ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರು ಹಾಗೂ ಶಿವಾನುಭವ ಸಮಿತಿಯ ಸಹ ಚೇರ್ಮನ್ ಶಿವಾನಂದ ಹೊಂಬಳ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್ಮನ್ ಐ ಬಿ ಬೆನಕೊಪ್ಪರವರು ಸ್ವಾಗತಿಸಿದರು ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP