
ಮಂಗಳೂರು, 09 ಜನವರಿ (ಹಿ.ಸ.) :
ಆ್ಯಂಕರ್ : ಮಂಗಳೂರಿನಲ್ಲಿ ಕಾಂಪಾ ಯೋಜನೆಯಡಿ ಅರಣ್ಯ ಸಿಬ್ಬಂದಿಗಾಗಿ ನಿರ್ಮಿಸಲಾದ ವಸತಿ ಗೃಹಗಳನ್ನು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಿಬ್ಬಂದಿಗೆ ಸುರಕ್ಷಿತ ಮತ್ತು ಸೌಲಭ್ಯಯುಕ್ತ ವಾಸಸ್ಥಳ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ವಸತಿ ಗೃಹಗಳು ಅವರ ಸೇವಾ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅವರು ಹೇಳಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa