
ಗದಗ, 09 ಜನವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಧಿಕಾರಿ ಸಿಎನ್ ಶ್ರೀಧರ ಅವರ ಮೊಬೈಲ್ ಫೋನ್ ಹ್ಯಾಕ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲಾಧಿಕಾರಿಗಳ ಮೊಬೈಲ್ ಸಂಖ್ಯೆಯಿಂದ ಅಜ್ಞಾತ ವ್ಯಕ್ತಿಗಳು ವಾಟ್ಸ್‌ಆಪ್ ಮೂಲಕ ವಿವಿಧ ವ್ಯಕ್ತಿಗಳಿಗೆ ಸಂದೇಶ ಕಳುಹಿಸುವ ಪ್ರಯತ್ನ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿಎನ್ ಶ್ರೀಧರ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ತಮ್ಮ ಹೆಸರಿನಲ್ಲಿ ಅಥವಾ ತಮ್ಮ ಮೊಬೈಲ್ ಸಂಖ್ಯೆಯಿಂದ ಯಾವುದೇ ರೀತಿಯ ಹಣಕಾಸು ಸಹಾಯ, ವೈಯಕ್ತಿಕ ಮಾಹಿತಿ ಅಥವಾ ತುರ್ತು ಸಹಾಯಕ್ಕಾಗಿ ವಿನಂತಿ ಬಂದರೆ ಅದಕ್ಕೆ ಪ್ರತಿಕ್ರಿಯಿಸಬಾರದು ಎಂದು ಮನವಿ ಮಾಡಿದ್ದಾರೆ.
ಯಾವುದೇ ಸಂದರ್ಭದಲ್ಲೂ ಹಣ ವರ್ಗಾವಣೆ ಮಾಡಬಾರದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಫೋನ್ ಹ್ಯಾಕ್ ವಿಷಯವನ್ನು ಸಾರ್ವಜನಿಕರಿಗೆ ತಿಳಿಸಲು ಜಿಲ್ಲಾಧಿಕಾರಿಗಳು ತಮ್ಮ ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ಎಚ್ಚರಿಕಾ ಸಂದೇಶ ಪ್ರಕಟಿಸಿದ್ದು, ತಮ್ಮ ಮೊಬೈಲ್ ಸಂಖ್ಯೆ ಹ್ಯಾಕ್ ಆಗಿರುವುದರಿಂದ ತಾತ್ಕಾಲಿಕವಾಗಿ ಯಾವುದೇ ವಿನಂತಿಗಳಿಗೆ ಸ್ಪಂದಿಸದಂತೆ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP