ಹುಬ್ಬಳ್ಳಿಯಲ್ಲಿ ಮಹಿಳೆ ಬೆತ್ತಲೆ ಘಟನೆ ; ಅಧಿಕಾರಿಗಳೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಭೆ
ಹುಬ್ಬಳ್ಳಿ, 09 ಜನವರಿ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಅವರ ಮೇಲೆ ಪೊಲೀಸರು ನಡೆಸಿದ ಎನ್ನಲಾದ ಥಳಿತ ಪ್ರಕರಣದ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಶಶ
Meeting


ಹುಬ್ಬಳ್ಳಿ, 09 ಜನವರಿ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಅವರ ಮೇಲೆ ಪೊಲೀಸರು ನಡೆಸಿದ ಎನ್ನಲಾದ ಥಳಿತ ಪ್ರಕರಣದ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ರವೀಶ್ ಹಾಗೂ ನಂದಗಾವಿ ಅವರೊಂದಿಗೆ ಪ್ರಕರಣದ ಸಂಪೂರ್ಣ ವಿವರಗಳನ್ನು ಚರ್ಚಿಸಿದ ಸಚಿವರು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಈ ಪ್ರಕರಣವನ್ನು ಇಲಾಖಾ ಮಟ್ಟದಲ್ಲಿ ಸಮಗ್ರವಾಗಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರತರಾಗಿರುವ BLO-2 ಸಿಬ್ಬಂದಿಗೆ ಯಾವುದೇ ಅಡಚಣೆಗಳು ಉಂಟಾಗದಂತೆ ಸೂಕ್ತ ಭದ್ರತೆ ಒದಗಿಸುವ ಅಗತ್ಯವಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಹು-ಧಾ ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಜ್ಯೋತಿ ಪಾಟೀಲ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande