
ಗದಗ, 09 ಜನವರಿ (ಹಿ.ಸ.)
ಆ್ಯಂಕರ್:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗದಗ ತಾಲೂಕು, ಗದಗ ಸಿಟಿ ವಲಯದಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಭಾ ಕಾರ್ಯಕ್ರಮವನ್ನು ನಗರದ ಸಂಸ್ಕೃತ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಓಂಕಾರೇಶ್ವರ ಹಿರೇಮಠದ ಪಟ್ಟಾಧ್ಯಕ್ಷರಾದ ಷ. ಬ್ರ. ಶ್ರೀ ಫಕೀರೇಶ್ವರ ಸ್ವಾಮೀಜಿ ವಹಿಸಿ ಆಶಿರ್ವಚನ ನೀಡಿದರು. ಅಧ್ಯಕ್ಷತೆಯನ್ನು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಕೀರ್ತಿ ಜಕನೂರು ವಹಿಸಿದ್ದರು.
ಕ್ರಾಂತಿಸೇನಾ ಗದಗ ಜಿಲ್ಲಾಧ್ಯಕ್ಷ ಬಾಬು ಬಾಕಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರ್ಥಿಕವಾಗಿ ಮಹಿಳೆಯರು ಸಬಲರಾಗಲು ಧರ್ಮಸ್ಥಳ ಸಂಸ್ಥೆ ಸಹಾಯ ಮಾಡುತ್ತದೆ. ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP