
ಮಂಡ್ಯ, 09 ಜನವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಇಂದು ಮಂಡ್ಯ ಸಂಚಾರ ಪೊಲೀಸ್ ಠಾಣೆ, ಕೆ.ಎಸ್.ಆರ್.ಟಿ.ಸಿ ಹಾಗೂ ಆರ್‌ಟಿಒ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಡ್ಯ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೊದಲ್ಲಿ ಚಾಲಕರು ಹಾಗೂ ಕಂಡಕ್ಟರ್‌ಗಳಿಗೆ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಕುರಿತು ಕಾನೂನು ಅರಿವು ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಕಾರ್ಯಾಗಾರದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವಲ್ಲಿ ಚಾಲಕರ ಜವಾಬ್ದಾರಿ, ವೇಗ ನಿಯಂತ್ರಣ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವುದು, ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಬಳಕೆಯ ಮಹತ್ವ ಸೇರಿದಂತೆ ವಿವಿಧ ಸಂಚಾರಿ ನಿಯಮಗಳ ಕುರಿತು ವಿವರವಾಗಿ ತಿಳಿಸಲಾಯಿತು. ಸಾರ್ವಜನಿಕ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬಸ್‌ಗಳಿಗೆ ರಸ್ತೆ ಸುರಕ್ಷತಾ ಸಂದೇಶಗಳಿರುವ ಜಾಗೃತಿ ಸ್ಟಿಕ್ಕರ್‌ಗಳನ್ನು ಅಂಟಿಸಲಾಯಿತು.
ಈ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹೆಚ್ಚಿಸಿ, ಅಪಘಾತರಹಿತ ಸಂಚಾರ ವ್ಯವಸ್ಥೆ ರೂಪಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa