
ಶಿವಮೊಗ್ಗ, 09 ಜನವರಿ (ಹಿ.ಸ.) :
ಆ್ಯಂಕರ್ : ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ, ಅಸಭ್ಯ ವರ್ತನೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಅಕ್ಕ ಪಡೆಯು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.
ಇಂದು ದಿನಾಂಕ 09-01-2026 ರಂದು ಅಕ್ಕ ಪಡೆಯು ಶಿವಮೊಗ್ಗ ನಗರದ ಬಸ್ ನಿಲ್ದಾಣ, ಮಾರುಕಟ್ಟೆ ಪ್ರದೇಶಗಳು, ದೇವಸ್ಥಾನಗಳು ಹಾಗೂ ಪಾರ್ಕ್‌ಗಳ ಸುತ್ತಮುತ್ತ ಗಸ್ತು ಕಾರ್ಯಾಚರಣೆ ನಡೆಸಿತು. ಈ ವೇಳೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವ ಜೊತೆಗೆ ಅಶಾಂತಿ ಉಂಟುಮಾಡುವವರ ಮೇಲೆ ನಿಗಾ ವಹಿಸಲಾಯಿತು.
ಗಾಂಧಿ ಪಾರ್ಕ್‌ನಲ್ಲಿ ಶಾಲಾ ಮಕ್ಕಳಿಗೆ ತುರ್ತು ಸೇವಾ ಸಹಾಯವಾಣಿ ಸಂಖ್ಯೆಗಳು, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಮಹಿಳಾ ಸಹಾಯವಾಣಿ ಕುರಿತು ಅಕ್ಕ ಪಡೆಯ ಸಿಬ್ಬಂದಿ ಜಾಗೃತಿ ಮೂಡಿಸಿದರು. ಮಕ್ಕಳು ಮತ್ತು ಮಹಿಳೆಯರು ಯಾವುದೇ ಸಮಸ್ಯೆ ಎದುರಾದರೆ ತಕ್ಷಣ ಪೊಲೀಸರ ನೆರವು ಪಡೆಯುವಂತೆ ತಿಳಿಸಲಾಯಿತು.
ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಇಂತಹ ಗಸ್ತು ಮತ್ತು ಜಾಗೃತಿ ಕಾರ್ಯಕ್ರಮಗಳು ಮುಂದುವರಿಯಲಿವೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa