
ಗದಗ, 09 ಜನವರಿ (ಹಿ.ಸ.) :
ಆ್ಯಂಕರ್ : ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಜನೆವರಿ 14 ರ ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯ ವರೆಗೆ “ಪುರಸಭೆ ಸಭಾ ಭವನ ನರಗುಂದದಲ್ಲಿ” ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ವಿಜಯ ಬಿರಾದಾರ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು, ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಯಾವುದೇ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಬಹುದು.
ಹಿಂದೂಸ್ತಾನ್ ಸಮಾಚಾರ್ / lalita MP