ದುಬೈ ಗ್ಲೋಬಲ್ ವಿಲೇಜ್‌ನಲ್ಲಿ ಕನ್ನಡ ಸಿನಿಮಾ ‘ವೈಲ್ಡ್ ಟೈಗರ್ ಸಫಾರಿ’ ಟೀಸರ್ ಬಿಡುಗಡೆ
ದುಬೈ, 09 ಜನವರಿ (ಹಿ.ಸ.) : ಆ್ಯಂಕರ್ : ದುಬೈನ ಪ್ರಸಿದ್ಧ ಗ್ಲೋಬಲ್ ವಿಲೇಜ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ಕೆಜಿಎಫ್ ಖ್ಯಾತಿಯ ನಿರ್ದೇಶಕ ಚಂದ್ರಮೌಳಿ ಅವರ ನಿರ್ದೇಶನದ ‘ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಟೀಸರ್ ಅನ್ನು ಅದ್ದೂರಿಯಾಗಿ ಅನ
Teaser lanch


ದುಬೈ, 09 ಜನವರಿ (ಹಿ.ಸ.) :

ಆ್ಯಂಕರ್ : ದುಬೈನ ಪ್ರಸಿದ್ಧ ಗ್ಲೋಬಲ್ ವಿಲೇಜ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಕನ್ನಡ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ಕೆಜಿಎಫ್ ಖ್ಯಾತಿಯ ನಿರ್ದೇಶಕ ಚಂದ್ರಮೌಳಿ ಅವರ ನಿರ್ದೇಶನದ ‘ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಟೀಸರ್ ಅನ್ನು ಅದ್ದೂರಿಯಾಗಿ ಅನಾವರಣಗೊಳಿಸಲಾಯಿತು.

ಈ ಚಿತ್ರದ ವಿಶೇಷ ಆಕರ್ಷಣೆಯಾಗಿ ಬಾಲಿವುಡ್‌ನ ಖ್ಯಾತ ಕೊರಿಯೋಗ್ರಾಫರ್ ರೆಮೋ ಡಿ’ಸೋಝಾ ಅವರ ಸಾಥ್ ದೊರೆತಿದೆ. ಶಿಥಿಲ್ ಪೂಜಾರಿ, ಧರ್ಮೇಶ್, ಸುಶಾಂತ್, ಕೆಜಿಎಫ್ ಖ್ಯಾತಿಯ ಅವಿನಾಶ್, ಅಚ್ಯುತ್ ಕುಮಾರ್ ಹಾಗೂ ನಿಮಿಕಾ ರತ್ನಾಕರ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರವನ್ನು VK ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ.

ಚಿತ್ರದ ಟೀಸರ್ ಅನ್ನು ಜನವರಿ 10ರಂದು ಬೆಳಿಗ್ಗೆ 11 ಗಂಟೆ 17 ನಿಮಿಷಕ್ಕೆ VK FILMS ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ದುಬೈನಲ್ಲಿ ನಡೆದ ಈ ವಿಶಿಷ್ಟ ಕಾರ್ಯಕ್ರಮ ಕನ್ನಡ ಸಿನಿರಂಗದ ಜಾಗತಿಕ ಪಸರಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande