
ಬೆಂಗಳೂರು, 09 ಜನವರಿ (ಹಿ.ಸ.) :
ಆ್ಯಂಕರ್ : ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಉನ್ನತ ಅಧಿಕಾರಿಗಳೊಂದಿಗೆ 2024–25ರ ಆಯವ್ಯಯ ಘೋಷಣೆಯಡಿ ಒಳಗೊಂಡಿರುವ ಬೆಂಗಳೂರು–ಮಂಗಳೂರು ಹೈ ಸ್ಪೀಡ್ ಕಾರಿಡಾರ್ ಮತ್ತು ಬೀದರ್–ಬೆಂಗಳೂರು ಎಕಾನಾಮಿಕ್ ಕಾರಿಡಾರ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಇಂದು ಸವಿಸ್ತಾರ ಚರ್ಚೆ ನಡೆಸಿದರು.
ಸಭೆಯಲ್ಲಿ ಯೋಜನೆಗಳ ಪ್ರಸ್ತುತ ಪ್ರಗತಿ, ಭೂಸ್ವಾಧೀನ, ತಾಂತ್ರಿಕ ಅಂಶಗಳು, ಹಣಕಾಸು ವ್ಯವಸ್ಥೆ ಹಾಗೂ ಅನುಷ್ಠಾನ ಸಮಯರೇಖೆ ಕುರಿತು ಪರಿಶೀಲನೆ ನಡೆಸಲಾಯಿತು. ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ನೀಡುವಲ್ಲಿ ಈ ಮಹತ್ವಾಕಾಂಕ್ಷಿ ಕಾರಿಡಾರ್ ಯೋಜನೆಗಳು ಪ್ರಮುಖ ಪಾತ್ರ ವಹಿಸಲಿವೆ. ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವ ಮೂಲಕ ಪ್ರಾದೇಶಿಕ ಆರ್ಥಿಕ ಬೆಳವಣಿಗೆಯಿಗೂ ಸಹಕಾರಿಯಾಗಲಿವೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa