
ಬಳ್ಳಾರಿ, 01 ಅಕ್ಟೋಬರ್ (ಹಿ.ಸ.)
ನಗರದ ಬ್ರೂಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾರೆಣ್ಣ ಎನ್ನುವ 27 ವರ್ಷದ ವ್ಯಕ್ತಿ ಆಗಸ್ಟ್.24 ರಂದು ಮನೆಯಿಂದ ಹೊರಗಡೆ ಹೋದವರು ಮರಳಿ ಬಾರದೇ ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ವ್ಯಕ್ತಿಯ ಚಹರೆ:
ಎತ್ತರ 5.8 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಡುವಾಗ ಅರ್ಧತೋಳಿನ ಕಪ್ಪು ಬಣ್ಣದ ಟೀ-ಶರ್ಟ್ ಮತ್ತು ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್ಪೇಟೆ ಪೊಲೀಸ್ ಠಾಣೆ ದೂ.08392-272022, ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್