ಬೆಳೆ ಸಮೀಕ್ಷೆ : ಅಕ್ಟೋಬರ್ 5 ಕೊನೆಯ ದಿನ
ಬಳ್ಳಾರಿ, 01 ಅಕ್ಟೋಬರ್ (ಹಿ.ಸ.) ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿ
ಬೆಳೆ ಸಮೀಕ್ಷೆ : ಅಕ್ಟೋಬರ್ 5 ಕೊನೆಯ ದಿನ


ಬಳ್ಳಾರಿ, 01 ಅಕ್ಟೋಬರ್ (ಹಿ.ಸ.)

ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಆಗಸ್ಟ್ 15 ರಿಂದ ಆರಂಭವಾಗಿರುವ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ರೈತರು ತಮ್ಮ ಮೊಬೈಲ್ನಲ್ಲಿ ‘ಬೆಳೆ ದರ್ಶಕ’ ಆಪ್ ಡೌನ್ಲೋಡ್ ಮಾಡಿಕೊಂಡು, ಬೆಳೆ ಸಮೀಕ್ಷೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ.

*ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:*

ಬೆಳೆ ಸಮೀಕ್ಷೆಯಲ್ಲಿ ದಾಖಲಾಗಿರುವ ಬೆಳೆ, ವಿಸ್ತೀರ್ಣ ಅಥವಾ ಇತರ ಯಾವುದೇ ವಿವರಗಳಲ್ಲಿ ವ್ಯತ್ಯಾಸ ಅಥವಾ ತಪ್ಪುಗಳು ಕಂಡುಬ0ದಲ್ಲಿ, ರೈತರು ಇದೇ ‘ಬೆಳೆ ದರ್ಶಕ’ ಆಪ್ ಮೂಲಕವೇ ನೇರವಾಗಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

*ಸರ್ಕಾರಿ ಸೌಲಭ್ಯಗಳಿಗೆ ಬೆಳೆ ಸಮೀಕ್ಷೆ ಆಧಾರ:*

ಬೆಳೆ ಸಮೀಕ್ಷೆಯಲ್ಲಿ ನಿಖರವಾಗಿ ದಾಖಲಾದ ಬೆಳೆ ವಿವರಗಳೇ ಮುಂದಿನ ದಿನಗಳಲ್ಲಿ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ಸರ್ಕಾರದ ವಿವಿಧ ಕೃಷಿ/ತೋಟಗಾರಿಕೆ ಯೋಜನೆಗಳ ಸೌಲಭ್ಯ ಪಡೆಯಲು ಪ್ರಮುಖ ಆಧಾರವಾಗಿರುತ್ತವೆ. ಹಾಗಾಗಿ ರೈತರು ಅಕ್ಟೋಬರ್ 5 ರೊಳಗಾಗಿ ತಮ್ಮ ಬೆಳೆ ವಿವರಗಳನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಬಳ್ಳಾರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು (ದೂರವಾಣಿ: 08392-294126) ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande