
ಕೋಲಾರ, ೦೧ ಅಕ್ಟೋಬರ್ (ಹಿ.ಸ) : ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರೈತರು ಕಂಗಾಲಾಗಿದ್ದಾರೆ. ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದೆ. ಆದರೆ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಪರಿಹಾರ ಕಲ್ಪಿಸುತ್ತಿಲ್ಲ. ಬದಲಾಗಿ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸುತ್ತಿದೆ. ಈ ಹಿಂದೆ ರಾಜ್ಯದಲ್ಲಿ ನೆರೆ ಆವಳಿ ಬಂದಾಗ ಕೇಂದ್ರದ ನೆರವಿಗೆ ಕಾಯದೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ಕಲ್ಪಿಸಿದರು. ಆದರೆ ಇಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸುತ್ತದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದರು.
ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಗುರುವಾರ ನಡೆದ ಭಾರತೀಯ ಜನತಾಪಕ್ಷದ ಸೇವಾ ಸಂಕಲ್ಪ ಅಭಿಯಾನ ಮತ್ತು ಭೂತ್ ವಿಜಯ್ ಸಂಕಲ್ಪ ಕಾರ್ಯಕ್ರಮವನ್ನು ಭಾರತೀಯ ಜನತಾ ಪಕ್ಷದ ಕರ್ನಾಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಬೇಕು. ರೈತರಿಗೆ ಪರಿಹಾರ ನೀಡಲು ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ರೈತರಿಗೆ ಪರಿಹಾರ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ ವಿಧಾನಸಭೆಯನ್ನು ವಿಸರ್ಜಿಸಿ ಜನರ ಮುಂದೆ ಹೋಗಿ ಎಂದು ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದರು.
ವಿಧಾನಸೌಧದ ಮೆಟ್ಟಿಲ ಮೇಲೆ ಸರ್ಕಾರ ಉರ್ದು ಹಬ್ಬ ಆಚರಣೆ ಮಾಡಲು ಹೊರಟಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡಲು ರಾಜ್ಯ ಸರ್ಕಾರ ಉರ್ದು ಹಬ್ಬ ನಡೆಸಲು ಹೊರಟಿದೆ. ವಿಧಾನಸಭೆಯಲ್ಲಿ ಪಾಕಿಸ್ಥಾನಕ್ಕೆ ಜೈಕಾರ ಹಾಕಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ಈ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ವಿಧಾನಸೌಧ ಮೆಟ್ಟಿಲ ಮೇಲೆ ಕನ್ನಡ ರಾರಾಜಿಸಬೇಕು. ಆದರೆ ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲು ಉರ್ದು ಹಬ್ಬ ಮಾಡಲು ಹೊರಟಿದೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಅದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಮೂಲಕ ಬಹು ಸಂಖ್ಯಾತ ಹಿಂದುಗಳನ್ನು ನಿರ್ಲಕ್ಷö್ಯ ಮಾಡಿದೆ ಎಂದು ಆರೋಪಿಸಿದರು.
ತ್ರಿಭಾಷಾ ಸೂತ್ರವನ್ನು ವಿರೋಧ ಮಾಡುವ ರಾಜ್ಯ ಸರ್ಕಾರ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ರಾಜ್ಯದ ಜನರು ರೋಸಿ ಹೋಗಿದ್ದಾರೆ. ರೈತರು, ಹಿಂದುಗಳು ಮತ್ತು ಶೋಷಿತ ಸಮುದಾಯಗಳಿಗೆ ನ್ಯಾಯ ಕಲ್ಪಿಸುವ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಬೇಕೆಂದು ಜನರು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್