ಸಮಾಜದ ಏಕತೆ, ಪ್ರಗತಿಗೆ ಶ್ರಮಿಸುವೆ:ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ
ಬಾಗಲಕೋಟೆ, 01 ಅಕ್ಟೋಬರ್ (ಹಿ.ಸ.) ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ನೂತನ ಉಪಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ಸಂತಸ ಹಾಗೂ ಹೆಮ್ಮೆಯ ಜೊತೆಗೆ ಸಮಾಜದ ಕಲ್ಯಾಣಕ್ಕಾಗಿ ಮತ್ತಷ್ಟು ಶ್ರಮಿಸುವ ಹೊಣೆಗಾರಿಕೆಯನ್ನು ಹೆಚ್ಚಿಸಿದೆ ಎಂದು ಮಾಜಿ ಸಚಿವ ಡಾ. ಮುರುಗೇಶ್ ನಿರಾಣಿ ತಿಳ
ಅಭಿನಂದನೆ


ಬಾಗಲಕೋಟೆ, 01 ಅಕ್ಟೋಬರ್ (ಹಿ.ಸ.)

ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ನೂತನ ಉಪಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ಸಂತಸ ಹಾಗೂ ಹೆಮ್ಮೆಯ ಜೊತೆಗೆ ಸಮಾಜದ ಕಲ್ಯಾಣಕ್ಕಾಗಿ ಮತ್ತಷ್ಟು ಶ್ರಮಿಸುವ ಹೊಣೆಗಾರಿಕೆಯನ್ನು ಹೆಚ್ಚಿಸಿದೆ ಎಂದು ಮಾಜಿ ಸಚಿವ ಡಾ. ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ನೂತನ ಜವಾಬ್ದಾರಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮುಧೋಳದ ಸ್ವಗೃಹದಲ್ಲಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ನಿರಾಣಿ ಪರಿವಾರದ ಸದಸ್ಯರು, ಸಮಾಜದ ಗುರು-ಹಿರಿಯರು, ರಾಜಕೀಯ ಮುಖಂಡರು, ಉದ್ಯಮಿಗಳು, ಹಿತೈಷಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಹೂಗುಚ್ಛ ನೀಡಿ ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವ್ಯಕ್ತವಾದ ಅಪಾರ ಪ್ರೀತಿ ಮತ್ತು ಆತ್ಮೀಯತೆಗೆ ಮುರುಗೇಶ್ ನಿರಾಣಿ ಕೃತಜ್ಞತೆ ಸಲ್ಲಿಸಿದ್ದಾರೆ.

ತಮ್ಮ ಸಾಮಾಜಿಕ ಬದುಕಿನುದ್ದಕ್ಕೂ ಬೆಂಬಲವಾಗಿ ನಿಂತಿರುವ ಅಭಿಮಾನಿ ಬಳಗ, ಹಗಲಿರುಳು ಶ್ರಮಿಸುತ್ತಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ನಿರಾಣಿ ಪರಿವಾರದ ಸದಸ್ಯರು ಒಕ್ಕೊರಲಿನಿಂದ ನೀಡಿದ ಬೆಂಬಲ ತಮ್ಮನ್ನು ಭಾವುಕರನ್ನಾಗಿಸಿದೆ. ಸಮಾಜದ ವಿವಿಧ ವರ್ಗಗಳ ಗುರು-ಹಿರಿಯರು, ರಾಜಕೀಯ ರಂಗದ ಹಿರಿಯ-ಕಿರಿಯ ಮುಖಂಡರು, ಉದ್ಯಮಿಗಳು ಹಾಗೂ ಸಾರ್ವಜನಿಕರು ಖುದ್ದಾಗಿ ಆಗಮಿಸಿ ಶುಭ ಕೋರಿರುವುದು ತಮ್ಮ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅವರು ಹೇಳಿದ್ದಾರೆ.

ವೀರಶೈವ ಮಹಾಸಭೆಯ ರಾಜ್ಯ ಉಪಾಧ್ಯಕ್ಷರಾಗಿ ದೊರೆತಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರ ಮೂಲಕ ವೀರಶೈವ-ಲಿಂಗಾಯತ ಸಮುದಾಯದ ಸಂಘಟನೆ, ಏಕತೆ ಹಾಗೂ ಪ್ರಗತಿಗಾಗಿ ಶ್ರಮಿಸುವ ಸಂಕಲ್ಪ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

ಸಮಾಜದ ಅಭಿವೃದ್ಧಿ, ಸಂಘಟನೆ ಹಾಗೂ ಪರಸ್ಪರ ಸಹಕಾರಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಮಹಾಸಭೆಯ ಆಶಯಗಳನ್ನು ಮುಂದುವರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತಮ್ಮ ನಿವಾಸಕ್ಕೆ ಆಗಮಿಸಿ ಶುಭ ಕೋರಿದವರು ಮಾತ್ರವಲ್ಲದೆ, ದೂರವಾಣಿ ಕರೆ, ಸಂದೇಶ ಹಾಗೂ ವಿವಿಧ ಮಾಧ್ಯಮಗಳ ಮೂಲಕ ಶುಭಾಶಯ ತಿಳಿಸಿದ ಪ್ರತಿಯೊಬ್ಬರಿಗೂ ಅವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಮೇಲಿನ ಪ್ರೀತಿ, ವಿಶ್ವಾಸ, ಆಶೀರ್ವಾದ ಹಾಗೂ ಬೆಂಬಲ ಇದೇ ರೀತಿ ಮುಂದುವರಿಯಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande