ಕ್ಯಾಪ್ಟನ್ ಸ್ಮಿತ್ ಮಚಾರ್ ಅವರ ಅಸಾಧಾರಣ ಧೈರ್ಯಕ್ಕೆ ಆರ್.ಎಸ್.ಎಸ್ ಶ್ಲಾಘನೆ
ನವದೆಹಲಿ, 01 ಅಕ್ಟೋಬರ್ (ಹಿ.ಸ.): ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಅಖಿಲ ಭಾರತ ಪ್ರಚಾರ ಪ್ರಮುಖ ಸುನಿಲ್ ಆಂಬೇಕರ್ ಅವರು ಕ್ಯಾಪ್ಟನ್ ಸ್ಮಿತ್ ಮಚಾರ್ ಅವರ ಅಸಾಧಾರಣ ಧೈರ್ಯವನ್ನು ಶ್ಲಾಘಿಸಿ, ಅವರ ಸಾಹಸಕ್ಕೆ ಗೌರವ ಸಲ್ಲಿಸಿದ್ದಾರೆ. ದುಬೈಯಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿ
राष्ट्रीय स्वयंसेवक संघ की एक्स पोस्ट।


ನವದೆಹಲಿ, 01 ಅಕ್ಟೋಬರ್ (ಹಿ.ಸ.):

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಅಖಿಲ ಭಾರತ ಪ್ರಚಾರ ಪ್ರಮುಖ ಸುನಿಲ್ ಆಂಬೇಕರ್ ಅವರು ಕ್ಯಾಪ್ಟನ್ ಸ್ಮಿತ್ ಮಚಾರ್ ಅವರ ಅಸಾಧಾರಣ ಧೈರ್ಯವನ್ನು ಶ್ಲಾಘಿಸಿ, ಅವರ ಸಾಹಸಕ್ಕೆ ಗೌರವ ಸಲ್ಲಿಸಿದ್ದಾರೆ.

ದುಬೈಯಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ನಡೆದ ಘಟನೆಯ ಬಳಿಕ ಕ್ಯಾಪ್ಟನ್ ಸ್ಮಿತ್ ಮಚಾರ್ ಅವರು ಗಮನ ಸೆಳೆದಿದ್ದಾರೆ. ಘಟನೆಯ ಸಂದರ್ಭದಲ್ಲಿ ಅವರು ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಆರ್‌.ಎಸ್‌.ಎಸ್‌ ನ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಆಂಬೇಕರ್ ಅವರು, ಕ್ಯಾಪ್ಟನ್ ಮಚಾರ್ ಅವರು ತಮ್ಮ ಕರ್ತವ್ಯವನ್ನು ಮೀರಿ ಕಾರ್ಯನಿರ್ವಹಿಸಿ 170ಕ್ಕೂ ಹೆಚ್ಚು ಜನರ ಜೀವ ಉಳಿಸಲು ನೆರವಾಗಿದ್ದಾರೆ ಎಂದು ಹೇಳಿದ್ದಾರೆ. ಅವರು ನಿಜವಾದ ನಾಯಕ ಎಂದು ಬಣ್ಣಿಸಿರುವ ಆಂಬೇಕರ್, ಅವರ ಧೈರ್ಯ ಮತ್ತು ಸಮಯೋಚಿತ ಕ್ರಮಕ್ಕೆ ಇಡೀ ದೇಶ ಹೆಮ್ಮೆಪಡುತ್ತದೆ ಎಂದಿದ್ದಾರೆ. ಅಲ್ಲದೆ, ಕ್ಯಾಪ್ಟನ್ ಮಚಾರ್ ಅವರು ಶೀಘ್ರವಾಗಿ ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಫ್ಲೈದುಬೈ ವಿಮಾನದಲ್ಲಿ ಓಮನ್ ಮೂಲದ ಸಹ ಪೈಲಟ್‌ ಕ್ಯಾಪ್ಟನ್ ಮಚಾರ್ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿ ವಿಮಾನವನ್ನು ಅಪಘಾತಕ್ಕೀಡು ಮಾಡಲು ಪ್ರಯತ್ನಿಸಿದ್ದಾನೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ವೇಳೆ ಗಾಯಗೊಂಡಿದ್ದರೂ ಧೈರ್ಯ ಕಳೆದುಕೊಳ್ಳದ ಕ್ಯಾಪ್ಟನ್ ಮಚಾರ್ ಅವರು ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿ ವಿಮಾನ ಅಪಘಾತಕ್ಕೀಡಾಗುವುದನ್ನು ತಪ್ಪಿಸಿದ್ದಾರೆ. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande