ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರೇತರ ಕಾರ್ಯಕ್ರಮಕ್ಕೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರೇತರ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ‘ಉರ್ದು ಹಬ್ಬ’ ಆಯೋಜನೆ ಕುರಿತ ಚರ್ಚೆಯ ಬೆನ್ನಲ್ಲೇ ಸರ್ಕಾರ ಈ ಸ್ಪಷ್ಟನೆ ನೀಡಿದೆ.
karnataka-govt-clarifies-no-non-government-events-on-vidhana-soudha-steps


ಬೆಂಗಳೂರು, 01 ಅಕ್ಟೋಬರ್ (ಹಿ.ಸ.):

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸರ್ಕಾರೇತರ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸುವ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸರ್ಕಾರ ಈ ಸ್ಪಷ್ಟನೆ ನೀಡಿದೆ.

ವಿಧಾನಸೌಧವು ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾಗಿದ್ದು, ಅದರ ಆವರಣದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯಕ್ರಮಗಳಿಗೆ ನಿಯಮಾನುಸಾರ ಅವಕಾಶವಿದೆ.

ಆದರೆ ಸರ್ಕಾರೇತರ ಕಾರ್ಯಕ್ರಮಗಳಿಗೆ ವಿಧಾನಸೌಧದ ಮೆಟ್ಟಿಲುಗಳನ್ನು ಬಳಸಲು ಅವಕಾಶ ನೀಡಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ಈ ಕುರಿತು ಮುಖ್ಯಮಂತ್ರಿ ‌ಕಾರ್ಯಾಲಯ ಸ್ಪಷ್ಟನೆ ನೀಡಿದ್ದು, “ವಿಧಾನಸೌಧದ ಆವರಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿದೆ. ಆದರೆ ಸರ್ಕಾರೇತರ ಕಾರ್ಯಕ್ರಮಗಳನ್ನು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆಸಲು ಅವಕಾಶವಿಲ್ಲ” ಎಂದು ತಿಳಿಸಲಾಗಿದೆ.

ಇದೇ ವೇಳೆ, ನವೆಂಬರ್ 9ರಂದು ಉರ್ದು ದಿನಾಚರಣೆ ಅಂಗವಾಗಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸುವ ಕುರಿತು ಸಚಿವ ಯು.ಟಿ. ಖಾದರ್ ನೀಡಿದ್ದ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.

ಉರ್ದು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದಿಂದಲೂ ಆಕ್ಷೇಪ ವ್ಯಕ್ತವಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande