ಮಾರೇನಹಳ್ಳಿ ಜಂಕ್ಷನ್ನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಕೆಳ ಸೇತುವೆ ನಿರ್ಮಾಣಕ್ಕೆ ಚಿಂತನೆ
ಮಾರೇನಹಳ್ಳಿ ಜಂಕ್ಷನ್ನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಿಸಲು ಅಂಡರ್ಪಾಸ್ ನಿರ್ಮಾಣದ ಕುರಿತು ಚರ್ಚೆ ನಡೆದಿದೆ. ಮಡಿವಾಳ ಕೆರೆ ಅಭಿವೃದ್ಧಿ ಸೇರಿದಂತೆ ಜಂಕ್ಷನ್ಗಳ ಸುಧಾರಣೆ ಮತ್ತು ಪಾಲಿಕೆ ಆಸ್ತಿಗಳ ಡಿಜಿಟಲ್ ಮ್ಯಾಪಿಂಗ್ ಕುರಿತೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ.
marenahalli-junction-underpass-plan-to-control-traffic-in-bengaluru


ಬೆಂಗಳೂರು, 01 ಅಕ್ಟೋಬರ್ (ಹಿ.ಸ.):

ನಗರದ ದಕ್ಷಿಣ ಪಾಲಿಕೆ ವ್ಯಾಪ್ತಿಯ ಮಾರೇನಹಳ್ಳಿ ಜಂಕ್ಷನ್ನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಅಂಡರ್ಪಾಸ್ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದೆ.

ಈ ಸಂಬಂಧ ಪಾಲಿಕೆಯ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಮಡಿವಾಳ ಕೆರೆ ಅಭಿವೃದ್ಧಿ ಹಾಗೂ ವಿವಿಧ ಜಂಕ್ಷನ್ಗಳ ಸುಧಾರಣೆ ಕುರಿತೂ ಸಮಾಲೋಚನೆ ನಡೆಸಲಾಗಿದೆ.

ಬಿಬಿಎಂಪಿ ನಿವೃತ್ತ ಮುಖ್ಯ ಎಂಜಿನಿಯರ್ ಎಸ್. ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾರೇನಹಳ್ಳಿ ಜಂಕ್ಷನ್ನ 11ನೇ ಮುಖ್ಯರಸ್ತೆಯಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಕುರಿತು ಚರ್ಚಿಸಲಾಯಿತು.

ಜಂಕ್ಷನ್ನಲ್ಲಿ ಅಂಡರ್ಪಾಸ್ ನಿರ್ಮಿಸಿದರೆ ಸಿಲ್ಕ್ಬೋರ್ಡ್ ಕಡೆಯಿಂದ ಡಬಲ್ ಡೆಕ್ಕರ್ ಮೂಲಕ ಆಗಮಿಸುವ ವಾಹನಗಳ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಮಡಿವಾಳ ಕೆರೆ ಅಭಿವೃದ್ಧಿ, ಜಂಕ್ಷನ್ಗಳ ಅಭಿವೃದ್ಧಿ ಹಾಗೂ ಪಾಲಿಕೆ ಮತ್ತು ಸಾರ್ವಜನಿಕ ಆಸ್ತಿಗಳ ನಿರ್ವಹಣೆ ಕುರಿತೂ ಚರ್ಚೆ ನಡೆಯಿತು.

ಇದೇ ವೇಳೆ ಪಾಲಿಕೆ ವ್ಯಾಪ್ತಿಯ ಶಾಲೆಗಳು, ಆಸ್ಪತ್ರೆಗಳು, ಕ್ರೀಡಾಂಗಣಗಳು, ವಾಣಿಜ್ಯ ಮಳಿಗೆಗಳು ಹಾಗೂ ಸಮುದಾಯ ಭವನಗಳು ಸೇರಿದಂತೆ 300ಕ್ಕೂ ಅಧಿಕ ಪ್ರಮುಖ ಆಸ್ತಿಗಳನ್ನು GPS ಆಧಾರಿತ ಜಿಯೋ-ಲೊಕೇಶನ್ ಮೂಲಕ ಡಿಜಿಟಲ್ ಮ್ಯಾಪಿಂಗ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆಸ್ತಿಗಳ ವಿಸ್ತೀರ್ಣ, ಕಟ್ಟಡದ ಅಳತೆ, ಗಡಿ ಗುರುತುಗಳು ಹಾಗೂ ಛಾಯಾಚಿತ್ರಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ದಾಖಲಿಸುವ ಯೋಜನೆ ರೂಪಿಸಲಾಗಿದೆ.

ಪಾಲಿಕೆ ಆಸ್ತಿಗಳ ಗುತ್ತಿಗೆ ಮತ್ತು ಬಾಡಿಗೆ ವಿವರಗಳನ್ನು ಸಹ ಡಿಜಿಟಲ್ ವ್ಯವಸ್ಥೆಯಲ್ಲಿ ದಾಖಲಿಸಲಾಗುತ್ತಿದ್ದು, ಗುತ್ತಿಗೆ ಅವಧಿ ಮುಕ್ತಾಯಗೊಂಡ ಆಸ್ತಿಗಳನ್ನು ಗುರುತಿಸಲು ಹಾಗೂ ಆದಾಯ ಸಂಗ್ರಹವನ್ನು ಸುಧಾರಿಸಲು ಇದು ನೆರವಾಗಲಿದೆ ಎಂದು ಸಮಿತಿ ತಿಳಿಸಿದೆ.

ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರಾದ ಪ್ರೊ. ಆಂಜನೇಯಪ್ಪ, ಡಾ. ಜಿ. ಶಿವಕುಮಾರ್, ಪಾಲಿಕೆಯ ಮುಖ್ಯ ಎಂಜಿನಿಯರ್ಗಳಾದ ಬಸವರಾಜ್ ಕಬಾಡೆ ಹಾಗೂ ಮಾಲತಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande