ಸಿಜೆಪಿ ಹೋರಾಟದಲ್ಲಿ ದೇಶವಿರೋಧಿ ಶಕ್ತಿಗಳು ಭಾಗಿ: ಛಲವಾದಿ ನಾರಾಯಣಸ್ವಾಮಿ ಆರೋಪ
ಬೆಂಗಳೂರು, 10 ಅಕ್ಟೋಬರ್ (ಹಿ.ಸ.): ದೇಶವಿರೋಧಿ ಶಕ್ತಿಗಳು ಸಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಜೆಪಿ ಪ್ರತಿಭಟ
ವಿಧಾನ ಪರಿಷತ್ತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಂಗ್ರಹ ಚಿತ್ರ


ಬೆಂಗಳೂರು, 10 ಅಕ್ಟೋಬರ್ (ಹಿ.ಸ.):

ದೇಶವಿರೋಧಿ ಶಕ್ತಿಗಳು ಸಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಜೆಪಿ ಪ್ರತಿಭಟನೆಗೆ ಕೇಂದ್ರ ಸರ್ಕಾರ ಹೆದರಿಲ್ಲ. ಇದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಸಿಜೆಪಿ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ದೇಶವಿರೋಧಿ ಶಕ್ತಿಗಳು ಮುಖಂಡರೊಂದಿಗೆ ಸೇರಿಕೊಂಡು ವಿದ್ಯಾರ್ಥಿಗಳನ್ನು ಬದಿಗಿಟ್ಟು ಹೋರಾಟ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಕೇಂದ್ರ ಸರ್ಕಾರ ಗಮನಿಸಿದೆ ಎಂದು ಹೇಳಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸಾಂವಿಧಾನಿಕ ಹುದ್ದೆಯಲ್ಲಿದ್ದಾರೆ. ಅವರಿಂದ ತಪ್ಪಾಗಿದ್ದರೆ ನ್ಯಾಯಾಲಯದ ಮೊರೆ ಹೋಗಬಹುದು. ಆದರೆ, ಇದುವರೆಗೆ ಅವರು ನ್ಯಾಯಾಲಯಕ್ಕೆ ಹೋಗಲು ಸಿದ್ಧರಾಗಿಲ್ಲ. ಪ್ರಕಾಶ್ ರಾಜ್ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಬಾರದು ಎನ್ನುತ್ತಾರೆ. ಹಾಗಾದರೆ ಮೃತಪಟ್ಟವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಹಾಗೆಯೇ ಉಳಿಯಬೇಕೇ ಎಂದು ಪ್ರಶ್ನಿಸಿದರು.

ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸುವವರು, ಅವರು ಮಾಡಿದ ತಪ್ಪೇನು ಎಂಬುದನ್ನು ಸ್ಪಷ್ಟವಾಗಿ ತೋರಿಸಬೇಕು. ಆದರೆ, ಇದುವರೆಗೆ ಅವರಿಂದ ಅದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಭಯೋತ್ಪಾದಕರ ಹೆಸರುಗಳನ್ನು ಉಲ್ಲೇಖಿಸಿ ಮಾತನಾಡುವುದು ಎಷ್ಟು ಸರಿ? ಪ್ರತಿಭಟನಾಕಾರರಿಗೆ ನ್ಯಾಯಾಲಯಗಳ ಮೇಲೆ ನಂಬಿಕೆಯಿಲ್ಲವೇ? ಬೀದಿಯಲ್ಲಿ ಗದ್ದಲ ನಡೆಸುವುದು ಸರಿಯಲ್ಲ. ವಿಚ್ಛಿದ್ರಕಾರಿ ಶಕ್ತಿಗಳು ದೇಶದೊಳಗೆ ನುಸುಳಿ ಭಾರತವನ್ನು ಒಡೆಯುವ ಕೆಲಸದಲ್ಲಿ ತೊಡಗಿವೆ ಎಂದು ಆರೋಪಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande