ಕೆ.ಎಂ. ಸುರೇಶ್ ಪರ ಸಂಸದ ಗೋವಿಂದ ಕಾರಜೋಳ ಮತಯಾಚನೆ
ಚಿತ್ರದುರ್ಗ, 10 ಅಕ್ಟೋಬರ್ (ಹಿ.ಸ.): ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪರವಾಗಿ ಸಂಸದ ಗೋವಿಂದ ಕಾರಜೋಳ ಅವರು ಹೊಸದುರ್ಗ ತಾಲೂಕಿನಲ್ಲಿ ಮತಯಾಚನೆ ನಡೆಸಿದರು. ಪದವೀಧರರು, ಯುವಜನರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ
ಕಾರಜೋಳ


ಚಿತ್ರದುರ್ಗ, 10 ಅಕ್ಟೋಬರ್ (ಹಿ.ಸ.):

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪರವಾಗಿ ಸಂಸದ ಗೋವಿಂದ ಕಾರಜೋಳ ಅವರು ಹೊಸದುರ್ಗ ತಾಲೂಕಿನಲ್ಲಿ ಮತಯಾಚನೆ ನಡೆಸಿದರು.

ಪದವೀಧರರು, ಯುವಜನರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಧ್ವನಿಯಾಗಲು ಕೆ.ಎಂ. ಸುರೇಶ್ ಅವರಂತಹ ನಾಯಕರು ಆಯ್ಕೆಯಾಗಬೇಕು. ಆದ್ದರಿಂದ ಪದವೀಧರ ಮತದಾರರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande