
ಮೈಸೂರು, 10 ಅಕ್ಟೋಬರ್ (ಹಿ.ಸ.):
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ ಇಲಾಖೆಯ ವತಿಯಿಂದ ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಕ್ಟೋಬರ್ 16ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಖ್ಯಾತ ಪರ್ವತಾರೋಹಿ ಪ್ರೀತ್ ಅಪ್ಪಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ದಸರಾ ಮಹೋತ್ಸವದ ಸಂಭ್ರಮದಲ್ಲಿ ನಡೆಯಲಿರುವ ಈ ಪಾರಂಪರಿಕ ಸೈಕಲ್ ಸವಾರಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ಪುರಾತತ್ತ್ವ ಇಲಾಖೆ ಕೋರಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.