ಹೈನುಗಾರಿಕೆ ಅಭಿವೃದ್ಧಿಯಲ್ಲಿ ಕೃತಕ ಗರ್ಭಧಾರಣೆ ಕಾರ್ಯಕರ್ತರ ಪಾತ್ರ ಮಹತ್ವದ್ದು: ಡಿ.ಕೆ. ಸುರೇಶ್
ಬೆಂಗಳೂರು, 10 ಅಕ್ಟೋಬರ್ (ಹಿ.ಸ.): ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃತಕ ಗರ್ಭಧಾರಣೆ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು. ಬಮೂಲ್ ವತಿಯಿಂದ ಹೊಸಕೋಟೆ ಡೈರಿ ಆವರಣದಲ್ಲಿ ಆಯೋಜಿಸಿದ್ದ ಕೃತಕ ಗರ್ಭಧಾರಣೆ ಕಾರ್ಯಕರ್ತರ ಸಮಾವೇಶದಲ್ಲಿ
ಬ್ಯಾಗ ವಿತರಣೆ


ಬೆಂಗಳೂರು, 10 ಅಕ್ಟೋಬರ್ (ಹಿ.ಸ.):

ಹೈನುಗಾರಿಕೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃತಕ ಗರ್ಭಧಾರಣೆ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.

ಬಮೂಲ್ ವತಿಯಿಂದ ಹೊಸಕೋಟೆ ಡೈರಿ ಆವರಣದಲ್ಲಿ ಆಯೋಜಿಸಿದ್ದ ಕೃತಕ ಗರ್ಭಧಾರಣೆ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕರ್ತರಿಗೆ ಚೀಲಗಳನ್ನು ವಿತರಿಸಿ ಅವರು ಮಾತನಾಡಿದರು.

ಜಾನುವಾರುಗಳ ತಳಿ ಸುಧಾರಣೆ, ಹಾಲಿನ ಉತ್ಪಾದನೆ ಹೆಚ್ಚಳ ಹಾಗೂ ಹೈನುಗಾರರ ಆರ್ಥಿಕ ಸಬಲೀಕರಣಕ್ಕೆ ಕೃತಕ ಗರ್ಭಧಾರಣೆ ಕಾರ್ಯಕರ್ತರ ಸೇವೆ ಅಪಾರ ಕೊಡುಗೆ ನೀಡುತ್ತಿದೆ. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಇವರು ಪ್ರಮುಖ ಕೊಂಡಿಯಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಶರತ್ ಬಚ್ಚೇಗೌಡ, ಬಮೂಲ್ ನಿರ್ದೇಶಕರು ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande