
ಬೆಂಗಳೂರು, 10 ಅಕ್ಟೋಬರ್ (ಹಿ.ಸ.):
ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ವಿವಿಧ ಸಮಸ್ಯೆಗಳ ಕುರಿತು ರಾಜ್ಯ ಗೃಹ ಸಚಿವರು ಗಮನಹರಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲೆ ಹಲ್ಲೆ, ಕೊಲೆ ಹಾಗೂ ಲೈಂಗಿಕ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ದಲಿತ ಸಮುದಾಯದ ಜನರಿಗೆ ಸೂಕ್ತ ರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಗೃಹ ಸಚಿವರು ಕಾನೂನು ಸುವ್ಯವಸ್ಥೆಯತ್ತ ಹೆಚ್ಚಿನ ಗಮನ ಹರಿಸಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ಹಾಗೂ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆದ್ಯತೆ ನೀಡಬೇಕು ಎಂದು ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R