
ಬೆಂಗಳೂರು, 10 ಅಕ್ಟೋಬರ್ (ಹಿ.ಸ.):
ನಗರದ ರಿಚ್ಮಂಡ್ ರಸ್ತೆಯಲ್ಲಿರುವ ಕೇಂದ್ರ ಕಮಾಂಡ್ ಸೆಂಟರ್ ಹಾಗೂ ಸಮಗ್ರ ಪೊಲೀಸ್ ಭವನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಯೋಜನೆಯ ಪ್ರಗತಿ ಹಾಗೂ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸುವ ಮೂಲಕ ಕಣ್ಗಾವಲು ವ್ಯವಸ್ಥೆಯನ್ನು ಸುಧಾರಿಸುವುದು, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವುದು ಮತ್ತು ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಅಗತ್ಯದ ಬಗ್ಗೆ ಗಮನಹರಿಸಿದರು.
ಪೊಲೀಸ್ ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನಗಳ ಪರಿಣಾಮಕಾರಿ ಬಳಕೆಯಿಂದ ಅಪರಾಧಗಳ ಮೇಲೆ ನಿಗಾ ಇರಿಸಲು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಹೆಚ್ಚಿಸಲು ಸಾಧ್ಯವಾಗಲಿದೆ.
ಈ ನಿಟ್ಟಿನಲ್ಲಿ ಪೊಲೀಸ್ ಮೂಲಸೌಕರ್ಯವನ್ನು ಆಧುನೀಕರಿಸುವುದು, ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಆದ್ಯತೆ ನೀಡುವುದು ಹಾಗೂ ಪೊಲೀಸ್ ಸಿಬ್ಬಂದಿಗೆ ಉತ್ತಮ ಸೌಲಭ್ಯ ಮತ್ತು ಅಗತ್ಯ ಸಂಪನ್ಮೂಲಗಳನ್ನು ಒದಗಿಸುವ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ “ಕರ್ನಾಟಕದ ಪೊಲೀಸ್ ಮೂಲಸೌಕರ್ಯವನ್ನು ಆಧುನೀಕರಿಸಲು ಸರ್ಕಾರ ಬದ್ಧವಾಗಿದೆ.
ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುವುದು, ಅಪರಾಧ ತಡೆಗಟ್ಟುವಿಕೆಯನ್ನು ಸುಧಾರಿಸುವುದು ಹಾಗೂ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸುವ ಅಗತ್ಯವಿದೆ. ಸೈಬರ್ ಅಪರಾಧಗಳ ನಿಯಂತ್ರಣಕ್ಕೂ ಆದ್ಯತೆ ನೀಡಲಾಗುವುದು.
ಪೊಲೀಸ್ ಸಿಬ್ಬಂದಿಗೆ ಉತ್ತಮ ಸೌಲಭ್ಯ ಮತ್ತು ಸಂಪನ್ಮೂಲಗಳನ್ನು ಒದಗಿಸಿ ರಾಜ್ಯದ ಜನರ ಸುರಕ್ಷತೆಯನ್ನು ಖಚಿತಪಡಿಸುವುದು ಸರ್ಕಾರದ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R