
ಹುಬ್ಬಳ್ಳಿ, 11 ಅಕ್ಟೋಬರ್ (ಹಿ.ಸ.):
ವಿಧಾನ ಪರಿಷತ್ ನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಬಿರುಸುಗೊಂಡಿದ್ದು, ಹುಬ್ಬಳ್ಳಿಯ ವಿವಿಧೆಡೆ ನಡೆದ ಪ್ರಚಾರ ಸಭೆಗಳಲ್ಲಿ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು ಭಾಗವಹಿಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋಹನ ಲಿಂಬಿಕಾಯಿ ಅವರು ಈ ಹಿಂದೆಯೂ ವಿಧಾನ ಪರಿಷತ್‌ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಪದವೀಧರರ ಪರವಾಗಿ ವಿಧಾನ ಪರಿಷತ್‌ನಲ್ಲಿ ಸಮರ್ಥವಾಗಿ ಪ್ರತಿನಿಧಿಸಿದ್ದಾರೆ. ಈ ಬಾರಿಯೂ ಅವರಿಗೆ ಬೆಂಬಲ ನೀಡಿ ಗೆಲವು ಸಾಧಿಸಲು ಸಹಕರಿಸಿ ಎಂದು ಸಚಿವ ಲಾಡ್ ಅವರು ಮನವಿ ಮಾಡಿದರು.
ಸಭೆಗಳಲ್ಲಿ ಅಭ್ಯರ್ಥಿ ಮೋಹನ ಲಿಂಬಿಕಾಯಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಎಚ್ ಕೋನರಡ್ಡಿ ಸೇರಿದಂತೆ ಹಿರಿಯ ಮುಖಂಡರು, ಹಲವಾರು ಚುನಾಯಿತ ಪ್ರತಿನಿಧಿಗಳು, ಕೆಪಿಸಿಸಿ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.