
ಧಾರವಾಡ, 11 ಅಕ್ಟೋಬರ್ (ಹಿ.ಸ.):
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ಚುನಾವಣಾ ಪ್ರಚಾರದ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಕಾಲೇಜಿನಲ್ಲಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಗಣ್ಯರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಚುನಾವಣಾ ಪ್ರಚಾರ ನಡೆಸಿದರು.
ಸಭೆಯಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶೈಕ್ಷಣಿಕ ಸಂಸ್ಥೆಗಳ ಪ್ರಗತಿ ಹಾಗೂ ಪದವೀಧರರ ಆಶೋತ್ತರಗಳ ಕುರಿತು ಮಹತ್ವದ ವಿಚಾರ ವಿನಿಮಯ ನಡೆಯಿತು. ಶಿಕ್ಷಣ ಕ್ಷೇತ್ರದ ಪ್ರಮುಖರ ಅಭಿಪ್ರಾಯಗಳನ್ನು ಆಲಿಸಿ, ಪದವೀಧರರ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಪದವೀಧರರ ಧ್ವನಿಗೆ ಬಲ ತುಂಬಲು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಶೋತ್ತರಗಳಿಗೆ ಸ್ಪಂದಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಅನುಭವವನ್ನು ಸಮರ್ಪಿಸಲು ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ್, ಅಜಿತ್ ಪ್ರಸಾದ್, ಶ್ರೀಕಾಂತ್ ಪಾಟೀಲ, ಪ್ರಲ್ಹಾದ ಹಂಚಿನಮನಿ, ಚಂದ್ರಶೇಖರ ಪಾಟೀಲ ಸೇರಿದಂತೆ ಪಾಲಿಕೆ ಸದಸ್ಯರು, ಗಣ್ಯರು, ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.