
ಮೈಸೂರು, 11 ಅಕ್ಟೋಬರ್ (ಹಿ.ಸ.):
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಆಹಾರ ಮೇಳವನ್ನು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಚಿವ ರಿಜ್ವಾನ್ ಅರ್ಷದ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು,ಮೈಸೂರಿನವನಾಗಿ ನನ್ನ ತವರೂರಿನ ಸೇವೆ ಸಲ್ಲಿಸುವುದು ಹೆಮ್ಮೆಯ ಮತ್ತು ಸೌಭಾಗ್ಯದ ವಿಷಯವಾಗಿದೆ ಎಂದು ಹೇಳಿದರು.
ಮೈಸೂರು ದಸರಾ ಜಾತಿ, ಧರ್ಮಗಳ ಎಲ್ಲೆಗಳನ್ನು ಮೀರಿ ಜನರನ್ನು ಒಗ್ಗೂಡಿಸುವ ನಾಡಹಬ್ಬವಾಗಿದೆ. ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಸಂಪ್ರದಾಯ ಮತ್ತು ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಈ ಮಹೋತ್ಸವ ರಾಜ್ಯದ ಹೆಮ್ಮೆಯ ಸಂಕೇತವಾಗಿದೆ ಎಂದು ಸಚಿವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.