ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಟ್ರಿಪ್ಗಾಗಿ ಎಬಿವಿಪಿ ಪ್ರತಿಭಟನೆ
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿರುವ ಬಸ್ ಸಮಸ್ಯೆಯನ್ನು ಪರಿಹರಿಸಲು ಕೋರಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಬಳ್ಳಾರಿ ಜಿಲ್ಲಾ ಘಟಕವು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ವಿಭಾಗ
ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಟ್ರಿಪ್ಗಾಗಿ ಎಬಿವಿಪಿ ಪ್ರತಿಭಟನೆ


ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಟ್ರಿಪ್ಗಾಗಿ ಎಬಿವಿಪಿ ಪ್ರತಿಭಟನೆ


ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಟ್ರಿಪ್ಗಾಗಿ ಎಬಿವಿಪಿ ಪ್ರತಿಭಟನೆ


ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಟ್ರಿಪ್ಗಾಗಿ ಎಬಿವಿಪಿ ಪ್ರತಿಭಟನೆ


ಬಳ್ಳಾರಿ, 12 ಅಕ್ಟೋಬರ್ (ಹಿ.ಸ.)

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿರುವ ಬಸ್ ಸಮಸ್ಯೆಯನ್ನು ಪರಿಹರಿಸಲು ಕೋರಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಬಳ್ಳಾರಿ ಜಿಲ್ಲಾ ಘಟಕವು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿತು.

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ವಿಭಾಗ ಸಂಚಾಲಕರಾದ ಕೆ. ದಿಲೀಪಕುಮಾರ ಅವರು, ಪ್ರತಿಭಟನೆಯ ನೇತೃತ್ವವಹಿಸಿ, ಬಳ್ಳಾರಿ ನಗರಕ್ಕೆ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಪ್ರತಿದಿನ ವಿದ್ಯಾಭ್ಯಾಸಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ಸಮರ್ಪಕ ಬಸ್ ಸೌಲಭ್ಯವಿಲ್ಲದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಶಿಕ್ಷಣ ಸಂಸ್ಥೆಗಳಿಗೆ ಬರುವ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಲು ಬಸ್ಗಳ ಕೊರತೆಯ ಕಾರಣ ಬಸ್ಗಳು ಸಂಚರಿಸದಿರುವುದು ಹಾಗೂ ಜನದಟ್ಟಣೆಯಿಂದಾಗಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಶಾಲಾ – ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಗಿನ ಮತ್ತು ಸಂಜೆ ಕಾಲೇಜು ಸಮಯದಲ್ಲಿ ಬಸ್ಗಳಲ್ಲಿ ಹೆಚ್ಚಿನ ಜನದಟ್ಟಣೆ ಉಂಟಾಗಿ, ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಡಚಣೆ ಆಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಾರಿಗೆ ಸೌಲಭ್ಯ ಅತ್ಯಂತ ಅಗತ್ಯವಾಗಿದ್ದು, ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಹೇಳಿದರು.

ಎಬಿವಿಪಿ ಕಾರ್ಯಕರ್ತ ಮನೋಜಕುಮಾರ ಅವರು, ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವುದು ಅವರ ಶಿಕ್ಷಣದ ಹಕ್ಕು ಮತ್ತು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮುಂದಿನ ಹಂತದ ಹೋರಾಟವನ್ನು ಕೈಗೊಳ್ಳಲಾಗುವುದು ಎಂದರು.

ಅಂತರರಾಜ್ಯ ಬಸ್ಸುಗಳಲ್ಲಿ ವಿದ್ಯಾರ್ಥಿಗಳ ಬಸ್ಪಾಸ್ಗೆ ಅವಕಾಶ ನೀಡಬೇಕು. ತೋರಣಗಲ್ಲಿನಿಂದ ಹೊರಟು ಕುಡತಿನಿ ಮಾರ್ಗವಾಗಿ ಬಳ್ಳಾರಿಗೆ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಚಾಲನೆ ಮಾಡಬೇಕು. ಬಳ್ಳಾರಿಯಿಂದ ಕುಡತಿನಿ ಮಾರ್ಗವಾಗಿ ತೋರಣಗಲ್ಲಿಗೆ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಸ್ ಚಾಲನೆ ಮಾಡಬೇಕು.

ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ಸಮಯಕ್ಕೆ ಅನುಗುಣವಾಗಿ ಬಸ್ಗಳ ಸಮಯವನ್ನು ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಹೆಚ್ಚಿನ ಸಂಖ್ಯೆಯನ್ನು ಪರಿಗಣಿಸಿ ಅಗತ್ಯವಿದ್ದಲ್ಲಿ ಹೆಚ್ಚುವರಿ ಟ್ರಿಪ್ಗಳನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳು ಬಸ್ಗಾಗಿ ದೀರ್ಘಕಾಲ ಕಾಯುವ ಪರಿಸ್ಥಿತಿ ತಪ್ಪಿಸಲು ಸೂಕ್ತ ಸಮಯಪಟ್ಟಿ ರೂಪಿಸಬೇಕು. ಈ ಮಾರ್ಗದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ ಸಮಸ್ಯೆಯನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಕೋರಿದ್ದಾರೆ.

ನಗರ ಸಂಘಟನಾ ಕಾರ್ಯದರ್ಶಿಗಳಾದ ಸಂದೀಪ ಅರಳಗುಂಡಿ ನಗರ ಸಹ ಕಾರ್ಯದರ್ಶಿಗಳಾದ ರಘು, ಹರ್ಷಿತ ರೆಡ್ಡಿ, ಕಾರ್ಯಕರ್ತರಾದ ಸಿ ಡಿ ಮಹೇಶ, ದೇವೇಂದ್ರ, ಪ್ರಜ್ವಲ್, ರೇವತಿ, ಭೂಮಿಕಾ, ಸಂಗಮ್ಮ, ಕೀರ್ತಿ, ಸ್ಪಂದನಾ ಸಾಯಿ ಗಣೇಶ ಶರತ ಮತ್ತು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande