ರಾಹುಲ್ ಗಾಂಧಿ ಮೌನಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಆಕ್ರೋಶ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಕ್ರಮಕ್ಕೆ ಆಗ್ರಹ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು
BJP-Mahila-Morcha-Protest-Against-Rahul-Gandhi-in-Bengaluru


ಬೆಂಗಳೂರು, 12 ಅಕ್ಟೋಬರ್ (ಹಿ.ಸ.):

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಂಸದ ಪ್ರೊ. ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ತನ್ನನ್ನು ತಾನು ನಿರಪರಾಧಿ ಎಂದು ಬಿಂಬಿಸಿಕೊಂಡಿದ್ದಾರೆ.

ಆದರೆ ಜೆಎನ್ಯು ಸಮಿತಿ ಅಕೋಯಿಜಮ್ ಅವರನ್ನು ಅಮಾನತು ಮಾಡಿದೆ. ಇವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಆರೋಪಿಸಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದರು ತನ್ನ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದರೆ ಅವರು ಮಾಡಿದ ಅಪರಾಧ ಸಾಬೀತಾಗಿದ್ದರಿಂದಲೇ ಅವರನ್ನು ವಜಾ ಮಾಡಲಾಗಿದೆ. ಸಂಸದರ ಕೃತ್ಯವನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಆರೋಪ ಎಸಗಿರುವ ಸಂಸದ ಅಕೋಯಿಜಮ್ ಗೆ ಶಿಕ್ಷೆಯಾಗಬೇಕು. ಇದಕ್ಕಾಗಿ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇಂತಹವರಿಗೆಲ್ಲ ಬೆಂಬಲ ನೀಡುವ ಪ್ರಿಯಾಂಕಾ ಗಾಂಧಿ ಅವರೇ ಎಲ್ಲಿದ್ದೀರಿ ಎಂದು ಪ್ರಶ್ನಿಸಿದರು.

ಪ್ರಿಯಾಂಕ ಗಾಂಧಿ ಅವರೇ, ನೀವು ನಿಮ್ಮ ಸಂಸದರ ಪರವಾಗಿ ನಿಂತಿದ್ದೀರಿ. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಪಕ್ಷ ತನ್ನ ನಡೆ ಮತ್ತು ನುಡಿಯಲ್ಲಿ ಸರಿ ಇಲ್ಲ.

ಆದರೆ ಅನ್ಯಾಯಕ್ಕೊಳಗಾಗಿರುವ ಮಹಿಳೆಯರ ಪರವಾಗಿ ಬಿಜೆಪಿ ನಿಲ್ಲಲಿದೆ. ಆರೋಪಿತ ಸಂಸದರಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande