ಬರ ಪರಿಹಾರ ಪಡೆಯಲು ರೈತರಿಗೆ ಎಫ್ಐಡಿ ನೋಂದಣಿ ಕಡ್ಡಾಯ
ಗದಗ, 12 ಅಕ್ಟೋಬರ್ (ಹಿ.ಸ.) 2026-27ನೇ ಸಾಲಿನ ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರಿಗೆ ವಿತರಿಸಲಾಗುವ ಬರ ಪರಿಹಾರದ ಹಣ ಪಡೆಯಲು ರೈತರು ಕಡ್ಡಾಯವಾಗಿ ರೈತ ಗುರುತಿನ ಸಂಖ್ಯೆ (ಎಫ್ಐಡಿ) ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ತಿಳಿಸಿದ್ದಾರೆ. ಸರ್ಕಾರವು
ಫೋಟೋ


ಗದಗ, 12 ಅಕ್ಟೋಬರ್ (ಹಿ.ಸ.)

2026-27ನೇ ಸಾಲಿನ ಬರಗಾಲದ ಹಿನ್ನೆಲೆಯಲ್ಲಿ ಸರ್ಕಾರದಿಂದ ರೈತರಿಗೆ ವಿತರಿಸಲಾಗುವ ಬರ ಪರಿಹಾರದ ಹಣ ಪಡೆಯಲು ರೈತರು ಕಡ್ಡಾಯವಾಗಿ ರೈತ ಗುರುತಿನ ಸಂಖ್ಯೆ (ಎಫ್ಐಡಿ) ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ತಿಳಿಸಿದ್ದಾರೆ.

ಸರ್ಕಾರವು ಬರ ಪರಿಹಾರದ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಕ್ರಮ ಕೈಗೊಂಡಿದೆ. ಇದಕ್ಕಾಗಿ ರೈತರ ವಿವರಗಳನ್ನು ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. ಫ್ರೂಟ್ಸ್ ದತ್ತಾಂಶಕ್ಕೆ ಜೋಡಣೆಯಾಗಿರುವ ಪರಿಹಾರ ತಂತ್ರಾಂಶದ ಮೂಲಕ ಹಣ ಪಾವತಿಸಲಾಗುವುದರಿಂದ ಎಫ್ಐಡಿ ಸಂಖ್ಯೆ ಹೊಂದಿರುವ ರೈತರಿಗೆ ಮಾತ್ರ ಪರಿಹಾರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಎಫ್ಐಡಿ ಸಂಖ್ಯೆ ಹೊಂದಿರದ ರೈತರು ಬರ ಪರಿಹಾರದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ಕೂಡಲೇ ನೋಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೇ ಎಫ್ಐಡಿ ಹೊಂದಿರದ ರೈತರ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.

ಪಟ್ಟಿಯಲ್ಲಿ ಹೆಸರು ಇರುವ ಗದಗ ತಾಲೂಕಿನ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ನೋಂದಣಿಗಾಗಿ ಪಹಣಿ ಪತ್ರಿಕೆ, ಆಧಾರ್ ಕಾರ್ಡ್ ಪ್ರತಿ ಹಾಗೂ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಪಾಸ್ಬುಕ್ ಪ್ರತಿಯನ್ನು ಸಲ್ಲಿಸಬೇಕು.

ಈಗಾಗಲೇ ಎಫ್ಐಡಿ ಹೊಂದಿರುವ ರೈತರು ತಮ್ಮ ಎಲ್ಲ ಸರ್ವೆ ನಂಬರ್ಗಳು ಎಫ್ಐಡಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಬರ ಪರಿಹಾರ ಪಡೆಯುವಲ್ಲಿ ಯಾವುದೇ ತೊಂದರೆ ಉಂಟಾಗದಂತೆ ರೈತರು ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಹಾಗೂ ಸರ್ವೆ ನಂಬರ್ಗಳ ಜೋಡಣೆ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande