ದಸರಾ ಹಬ್ಬದ ಪ್ರಯುಕ್ತ ಗದಗ ಮೃಗಾಲಯ ಸಾರ್ವಜನಿಕರ ವೀಕ್ಷಣೆಗೆ ಮುಕ್ತ
ಗದಗ, 12 ಅಕ್ಟೋಬರ್ (ಹಿ.ಸ.) ದಸರಾ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಪ್ರವಾಸಿಗರು, ಸಾರ್ವಜನಿಕರು ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ಗದಗ ಮೃಗಾಲಯವನ್ನು ಅಕ್ಟೋಬರ್ ತಿಂಗಳ ಪ್ರತಿ ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್ ತಿಂಗಳ ಸಾಮಾನ್
ಫೋಟೋ


ಗದಗ, 12 ಅಕ್ಟೋಬರ್ (ಹಿ.ಸ.)

ದಸರಾ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಪ್ರವಾಸಿಗರು, ಸಾರ್ವಜನಿಕರು ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ಗದಗ ಮೃಗಾಲಯವನ್ನು ಅಕ್ಟೋಬರ್ ತಿಂಗಳ ಪ್ರತಿ ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲು ನಿರ್ಧರಿಸಲಾಗಿದೆ.

ಅಕ್ಟೋಬರ್ ತಿಂಗಳ ಸಾಮಾನ್ಯ ರಜಾ ದಿನಗಳ ಜೊತೆಗೆ ಪ್ರತಿ ಮಂಗಳವಾರವೂ ಮೃಗಾಲಯಕ್ಕೆ ಭೇಟಿ ನೀಡಲು ವಿಶೇಷ ಅವಕಾಶ ಕಲ್ಪಿಸಲಾಗಿದೆ. ಇದರಿಂದ ದಸರಾ ರಜೆಯ ಸಂದರ್ಭದಲ್ಲಿ ಮಕ್ಕಳು, ಕುಟುಂಬದ ಸದಸ್ಯರು ಹಾಗೂ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡಿ ಪ್ರಾಣಿ-ಪಕ್ಷಿಗಳನ್ನು ವೀಕ್ಷಿಸಲು ಅನುಕೂಲವಾಗಲಿದೆ.

ದಸರಾ ಹಬ್ಬದ ರಜೆಯನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಗದಗ ಮೃಗಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಈ ವಿಶೇಷ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗದಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande