
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.)
ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರ ಆಪ್ತವರ್ಗದಲ್ಲಿದ್ದ ವೀರಶೈವ ಸಮಾಜದ ಮುಖಂಡ ತಿಮ್ಮಲಾಪುರದ ಟಿ. ನರೇಂದ್ರ (67) ಅವರು ಸೋಮವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದು, ಬುಧವಾರ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಮೃತರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಸಂಖ್ಯೆಯ ಬಂಧುವರ್ಗ, ಆಪ್ತರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ವೀರಶೈವ ರುದ್ರಭೂಮಿಯಲ್ಲಿ ಬುಧವಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರ ಪಾರ್ಥಿವ ಶರೀರವನ್ನು ಬಳ್ಳಾರಿಯ ನೆಹರು ಕಾಲೋನಿಯಲ್ಲಿ ಇರುವ ಅವರ ಮನೆಯಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ
ಇರಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್