ಬಳ್ಳಾರಿ: ಅಕ್ಟೋಬರ್ 14ರಂದು ತಾಲೂಕು ಮಟ್ಟದ ಯುವ ಸಂಸತ್ತು
ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) ‘ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ'' ಅಂಗವಾಗಿ ತಾಲೂಕು ಮಟ್ಟದ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಅಕ್ಟೋಬರ್ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ನಲ್ಲಚೆರುವು ಬಳಿಯಿರುವ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ಯುವಜನರು
ಬಳ್ಳಾರಿ: ಅಕ್ಟೋಬರ್ 14ರಂದು ತಾಲೂಕು ಮಟ್ಟದ ಯುವ ಸಂಸತ್ತು


ಬಳ್ಳಾರಿ, 12 ಅಕ್ಟೋಬರ್ (ಹಿ.ಸ.)

‘ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆ' ಅಂಗವಾಗಿ ತಾಲೂಕು ಮಟ್ಟದ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಅಕ್ಟೋಬರ್ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ನಲ್ಲಚೆರುವು ಬಳಿಯಿರುವ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ಆಯೋಜಿಸಲಾಗಿದೆ.

ಸಾರ್ವಜನಿಕರು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಂತರರಾಷ್ಟಿಯ ಪ್ರಜಾ ಪ್ರಭುತ್ವ ದಿನಾಚರಣೆ ಆಚರಣಾ ಸಮಿತಿಯ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande