
ಬಳ್ಳಾರಿ, 13 ಅಕ್ಟೋಬರ್ (ಹಿ.ಸ.)
ಬಳ್ಳಾರಿ ನಗರದ ಇಂಡಸ್ಟಿಯಲ್ ಏರಿಯಾದ ನಿವಾಸಿಯಾದ (ಮೂಲ ವಾಸ: ಉತ್ತರ ಪ್ರದೇಶ ರಾಜ್ಯದ ಅವರಾಯ ಕಲಾ ವೀಲೇಜ್) ಇಂಡೋ ಅಮೇರಿಕನ್ ಕಾಲೇಜಿನ ವಿದ್ಯಾರ್ಥಿಯಾದ ಶ್ರವಣ್ಕುಮಾರ್ ಗಿರಿ ಎಂಬ 21 ವರ್ಷದ ಯುವಕ ಕೇರಳಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿಹೋದವನು ಅ.07 ರಂದು ಕಾಣೆಯಾಗಿರುವ ಕುರಿತು ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಪತ್ತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.4 ಅಡಿ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಕಪ್ಪು ಗೆರೆಗಳುಳ್ಳ ತುಂಬು ತೋಳಿನ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಹಿಂದಿ, ತೆಲುಗು ಹಾಗೂ ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್