ಬಳ್ಳಾರಿ: ಡೆಂಗ್ಯು ಮತ್ತು ಚಿಕನ್ ಗುನ್ಯಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ
ಬಳ್ಳಾರಿ, 13 ಅಕ್ಟೋಬರ್ (ಹಿ.ಸ.) ಸೋಂಕು ಹೊಂದಿದ ಈಡೀಸ್ ಈಜಿಪ್ಟಿ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗೀ ಹಾಗೂ ಚಿಕೂನ್ಗುನ್ಯ ಜ್ವರಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ನಿಂತ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ವೇಳೆಯಲ್
ಬಳ್ಳಾರಿ: ಡೆಂಗ್ಯು ಮತ್ತು ಚಿಕನ್ ಗುನ್ಯಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ


ಬಳ್ಳಾರಿ, 13 ಅಕ್ಟೋಬರ್ (ಹಿ.ಸ.)

ಸೋಂಕು ಹೊಂದಿದ ಈಡೀಸ್ ಈಜಿಪ್ಟಿ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗೀ ಹಾಗೂ ಚಿಕೂನ್ಗುನ್ಯ ಜ್ವರಗಳ ನಿಯಂತ್ರಣಕ್ಕೆ ಸಾರ್ವಜನಿಕರು ಕೈಜೋಡಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ನಿಂತ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ವೇಳೆಯಲ್ಲಿ ಕಚ್ಚುತ್ತವೆ. ಈ ಸೊಳ್ಳೆಗಳು ಮೊಟ್ಟೆ, ಲಾರ್ವಾ ಮತ್ತು ಪ್ಯೂಪಾ ಹಂತಗಳನ್ನು ನೀರಿನಲ್ಲಿ ಪೂರೈಸಿ, 8 ರಿಂದ 10 ದಿನಗಳಲ್ಲಿ ಪೂರ್ಣ ಪ್ರಮಾಣದ ಸೊಳ್ಳೆಯಾಗಿ ಬೆಳೆಯುತ್ತವೆ.

*ರೋಗ ಲಕ್ಷಣಗಳು:*

ಹಠಾತ್ತನೆ ಕಾಣಿಸಿಕೊಳ್ಳುವ ತೀವ್ರ ಜ್ವರ, ವಿಪರೀತ ತಲೆನೋವು ಹಾಗೂ ಕಣ್ಣುಗಳ ಹಿಂಭಾಗದಲ್ಲಿ ನೋವು, ಮೈ-ಕೈ ನೋವು ಮತ್ತು ಕೀಲುಗಳಲ್ಲಿ ನೋವು, ವಾಕರಿಕೆ ಹಾಗೂ ವಾಂತಿ.

*ಸೊಳ್ಳೆ ಉತ್ಪತ್ತಿ ತಾಣಗಳು:*

ಸಿಮೆಂಟ್ ತೊಟ್ಟಿಗಳು, ಪ್ಲಾಸ್ಟಿಕ್ ಡ್ರಂಗಳು, ಬ್ಯಾರಲ್ಗಳು, ಬಕೆಟ್ಗಳು, ಏರ್ಕೂಲರ್ಗಳು, ಹೂವಿನ ಕುಂಡಗಳ ತಟ್ಟೆಗಳು, ತೆಂಗಿನ ಚಿಪ್ಪುಗಳು ಹಾಗೂ ಹಳೆಯ ಒಡೆದ ಟೈರ್ಗಳಲ್ಲಿ ಮಳೆ ನೀರು ಅಥವಾ ಸ್ವಚ್ಛ ನೀರು ನಿಲ್ಲುವುದರಿಂದ ಸೊಳ್ಳೆಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ.

*ಮುನ್ನೆಚ್ಚರಿಕೆ:*

ನೀರಿನ ಸಂಗ್ರಹಣಾ ತೊಟ್ಟಿಗಳು, ಏರ್ಕೂಲರ್ಗಳು ಮತ್ತು ಬ್ಯಾರಲ್ಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಚೆನ್ನಾಗಿ ಉಜ್ಜಿ ಸ್ವಚ್ಛಗೊಳಿಸಿ, ಮುಚ್ಚಳದಿಂದ ಮುಚ್ಚಬೇಕು. ಮನೆಯ ಸುತ್ತಮುತ್ತ ಇರುವ ಒಡೆದ ಬಾಟಲಿಗಳು, ಟೈರ್ಗಳು ಹಾಗೂ ತೆಂಗಿನ ಚಿಪ್ಪುಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆ ಪರದೆಗಳು, ಸೊಳ್ಳೆ ನಿರೋಧಕಗಳನ್ನು ಬಳಸಿ ಹಗಲು ಹೊತ್ತಿನಲ್ಲಿ ಸೊಳ್ಳೆ ಕಡಿತದಿಂದ ರಕ್ಷಣೆ ಪಡೆಯಬೇಕು.

ರೋಗದ ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಯಾವುದೇ ನಿರ್ಲಕ್ಷ ವಹಿಸದೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಪರೀಕ್ಷೆ ಮತ್ತು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande