ಬಿಹಾರದಲ್ಲಿ ದೋಣಿ ಮುಳುಗಿ 13 ಮಕ್ಕಳ ಸಾವು; ಏಳು ಮಂದಿಯ ರಕ್ಷಣೆ
ಪಾಟ್ನಾ/ವೈಶಾಲಿ, 14 ಅಕ್ಟೋಬರ್ (ಹಿ.ಸ.): ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರದಲ್ಲಿ ಗಂಗಾ ನದಿಯಲ್ಲಿ ಮಂಗಳವಾರ ತಡರಾತ್ರಿ ದೋಣಿ ಮುಳುಗಿ 13 ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳಲ್ಲಿ ಏಳು ಮಂದಿ ಒಂದೇ ಕುಟುಂಬದವರು. ದೋಣಿಯಲ್ಲಿದ್ದ ಇತರ ಏಳು ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ
मुख्यमंत्री की संवेदना वाली ट्वीट


ಪಾಟ್ನಾ/ವೈಶಾಲಿ, 14 ಅಕ್ಟೋಬರ್ (ಹಿ.ಸ.):

ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರದಲ್ಲಿ ಗಂಗಾ ನದಿಯಲ್ಲಿ ಮಂಗಳವಾರ ತಡರಾತ್ರಿ ದೋಣಿ ಮುಳುಗಿ 13 ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳಲ್ಲಿ ಏಳು ಮಂದಿ ಒಂದೇ ಕುಟುಂಬದವರು. ದೋಣಿಯಲ್ಲಿದ್ದ ಇತರ ಏಳು ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಶಾಲಿ ಜಿಲ್ಲಾಧಿಕಾರಿ ವರ್ಷಾ ಸಿಂಗ್ ಅವರು ಘಟನೆಯನ್ನು ದೃಢಪಡಿಸಿದ್ದಾರೆ. ದೋಣಿಯಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ 13 ಮಕ್ಕಳು ಮೃತಪಟ್ಟಿದ್ದು, ಎಲ್ಲ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನೆರೆ ಗ್ರಾಮದ ಭೋಜನಕೂಟದಲ್ಲಿ ಪಾಲ್ಗೊಳ್ಳಲು ಮಕ್ಕಳು ಸಣ್ಣ ದೋಣಿಯಲ್ಲಿ ತೆರಳುತ್ತಿದ್ದಾಗ ರಾತ್ರಿ ಸುಮಾರು 12 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ರಾಘೋಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಮಪುರ ಶ್ಯಾಮಚಂದ್ ಗ್ರಾಮದ ಸಮೀಪ ಗಂಗಾ ನದಿಯ ಮಧ್ಯಭಾಗದಲ್ಲಿ ದೋಣಿ ಸಮತೋಲನ ಕಳೆದುಕೊಂಡು ಮುಳುಗಿದೆ. ನದಿಯ ಆಳವಾದ ನೀರಿನಲ್ಲಿ ಪ್ರಯಾಣಿಕರು ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕ ಮತ್ತು ಆಕ್ರಂದನದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಮಾಹಿತಿ ತಿಳಿದ ತಕ್ಷಣ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು. ರಕ್ಷಿಸಲಾದ ಏಳು ಮಂದಿಯನ್ನು ಪಟನಾದ ರಾಷ್ಟ್ರೀಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ. ಪರಿಹಾರ

ದುರಂತಕ್ಕೆ ಬಿಹಾರದ ಮುಖ್ಯಮಂತ್ರಿ ಸಮ್ರಾಟ್ ಚೌಧರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಗ್ಧ ಮಕ್ಕಳ ಸಾವು ಅತ್ಯಂತ ದುಃಖಕರ ಮತ್ತು ಹೃದಯವಿದ್ರಾವಕವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಾಗೂ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ಪಕ್ಷದ ನಾಯಕ ತೇಜಸ್ವಿ ಯಾದವ್ ಕೂಡ ಘಟನೆಗೆ ಸಂತಾಪ ಸೂಚಿಸಿದ್ದಾರೆ. ರಾಘೋಪುರ ದಿಯಾರಾ ಪ್ರದೇಶದಲ್ಲಿ ದೋಣಿ ಮುಳುಗಿದ ದುರದೃಷ್ಟಕರ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದಾರೆ ಎಂದು ತಿಳಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿರುವ ಅವರು, ಸ್ಥಳೀಯರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande