
ಕಂಪ್ಲಿ, 14 ಅಕ್ಟೋಬರ್ (ಹಿ.ಸ.)
ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ವತಿಯಿಂದ ಕಂಪ್ಲಿಯ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಚೇರಿಯಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 10 ಗಂಟೆಗೆ ಗ್ರಾಹಕರ ಕುಂದು ಕೊರತೆಗಳ ಸಭೆಯನ್ನು ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಕಂಪ್ಲಿ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್