ಕೋಲಾರ ತಾಲ್ಲೂಕಿನ ಛತ್ರಕೋಡಿಹಳ್ಳಿ ಚೋಳಘಟ್ಟ ರಸ್ತೆ ಕಾಮಗಾರಿ ಆರಂಭ
ಕೋಲಾರ ತಾಲ್ಲೂಕಿನ ಛತ್ರಕೋಡಿಹಳ್ಳಿ ಚೋಳಘಟ್ಟ ರಸ್ತೆ ಕಾಮಗಾರಿ ಆರಂಭ
ಕೋಲಾರ ತಾಲ್ಲೂಕಿನ ಛತ್ರಕೋಡಿಹಳ್ಳಿ ಚೋಳಘಟ್ಟ ರಸ್ತೆ ಕಾಮಗಾರಿ ಆರಂಭ


ಕೋಲಾರ, 14 ಅಕ್ಟೋಬರ್ (ಹಿ.ಸ): ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ರೈತರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಛತ್ರಕೋಡಿಹಳ್ಳಿಯಿಂದ ಚೋಳಘಟ್ಟ ಮಾರ್ಗವಾಗಿ ಮಾಗೇರಿವರೆಗೆ ೪.೫ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಸಾಂಕೇತಿಕವಾಗಿ ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯರ ಮೂಲಕ ಚಾಲನೆ ನೀಡಿ ಕಾಮಗಾರಿ ಪ್ರಾರಂಭಿಸಲಾಯಿತು.

ಸುಮಾರು ೨೦ ವರ್ಷಗಳಿಂದ ನಾನಾ ಕಾರಣಗಳಿಂದ ಅಭಿವೃದ್ಧಿ ಕಾಣದೆ ಉಳಿದಿದ್ದ ಈ ರಸ್ತೆಯ ಅಭಿವೃದ್ಧಿಗೆ ಇದೀಗ ಅನುದಾನ ದೊರೆತಿರುವುದು ಸ್ಥಳೀಯರಲ್ಲಿ ಆಶಾಭಾವನೆ ಮೂಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರಳವಾಗಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಸ್ಥಳೀಯರು ತಿಳಿಸಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಶಾಸಕ ಕೊತ್ತೂರು ಮಂಜುನಾಥ್ ಅವರು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿ ರಸ್ತೆ ಕಾಮಗಾರಿಗೆ ಅನುದಾನ ಒದಗಿಸಿದ್ದಾರೆ. ಈ ಹಿಂದೆ ಎರಡು ಬಾರಿ ಅನುದಾನ ಮಂಜೂರಾಗಿದ್ದರೂ ವಿವಿಧ ಕಾರಣಗಳಿಂದ ಅದು ಹಿಂದಿರುಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅನುದಾನ ನೀಡಿರುವುದರಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗಿದೆ ಎಂದರು.

ಈ ರಸ್ತೆ ಅಭಿವೃದ್ಧಿಯಿಂದ ರೈತರು, ಗ್ರಾಮಸ್ಥರು ಹಾಗೂ ವಾಹನ ಸವಾರರ ಸಂಚಾರಕ್ಕೆ ಅನುಕೂಲವಾಗಲಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಪಕ್ಷದ ದೃಷ್ಟಿಯಿಂದ ನೋಡದೆ, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲರೂ ಬೆಂಬಲಿಸಬೇಕು. ಈ ಹಿಂದೆ ರಸ್ತೆ ವಿಚಾರವಾಗಿ ರೈತರನ್ನು ಮುಂದಿಟ್ಟುಕೊAಡು ಹೋರಾಟ ನಡೆಸಿದವರು ಇದೀಗ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande