
ಬಳ್ಳಾರಿ, 14 ಅಕ್ಟೋಬರ್ (ಹಿ.ಸ.)
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಎಸ್ಬಿಐ ಲೈಫ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಉಚಿತ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಎಸ್ಬಿಐ ಲೈಫ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ ಸಂಸ್ಥೆಯು ತಮ್ಮಲ್ಲಿ ಖಾಲಿ ಇರುವ 20 ಕ್ಕೂ ಹೆಚ್ಚು ಡೆವಲಪ್ಮೆಂಟ್ ಮ್ಯಾನೇಜರ್ (ಟೆಲಿಕಾಲರ್) ಹಾಗೂ ಒಂದು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳುವರು.
ವಿದ್ಯಾರ್ಹತೆಯು ಪಿಯುಸಿ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ ಹಾಗೂ 38 ವರ್ಷದ ಒಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದೆ. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ (ಉಚಿತ ಪ್ರವೇಶ).
ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವ-ವಿವರಗಳ ಪ್ರತಿಯೊಂದಿಗೆ ಕೆಳಗಿನ ವಿಳಾಸದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
*ಸಂದರ್ಶನ ನಡೆಯುವ ವಿಳಾಸ:*
ಎಸ್ಬಿಐ ಲೈಫ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ ಕಚೇರಿ, ಜಿ.ಎಸ್.ಆರ್ ಬಿಲ್ಡಿಂಗ್, ಪಾರ್ವತಿ ನಗರ ಮುಖ್ಯ ರಸ್ತೆ, ಬಳ್ಳಾರಿ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ:7619207762, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್