
ಕೋಲಾರ,14 ಅಕ್ಟೋಬರ್ (ಹಿ.ಸ) :
ನಾನು ಯಾವೂದೇ ಅಧಿಕಾರಕ್ಕಾಗಿ ರಾಜಕಾರಣಕ್ಕೆ ಬಂದವನಲ್ಲ. ಶಿಕ್ಷಕರ, ಪದವೀಧರರ ಹಾಗೂ ಸಾರ್ವಜನಿಕರ ಧ್ವನಿಯಾಗಿ ಪ್ರಮಾಣಿಕವಾಗಿ ಸೇವೆಗಾಗಿ ಸಲ್ಲಿಸುವ ದೆಸೆಯಲ್ಲಿ ಬಂದಿರುವೆ. ನಾನೇನು ಬಿಸಿನೆಸ್ ಮ್ಯಾನ್ ಅಲ್ಲ. ನಾನು ಸೇವೆ ಮಾಡಲು ರಾಜಕೀಯಕ್ಕೆ ಬಂದಿರುವೆ ನನಗೂ ಒಂದು ಅವಕಾಶ ಕಲ್ಪಿಸಿ ಕೊಡಿ ಎಂದು ಅಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಮನವಿ ಮಾಡಿದರು.
ನಗರದ ಮದರ್ ತೇರೇಸಾ ಹಾಗೂ ನಡುಪಳ್ಳಿಯ ಜ್ಞಾನ ಬೋಧ ವಿದ್ಯಾಸಂಸ್ಥೆಯಲ್ಲಿ ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರು. ಉಪನ್ಯಾಸಕರು ಹಾಗೂ ಪದವೀದರರಿಗೆ ಆಯೋಜಿಸಿದ್ದ ಅಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಪದವೀದರರಿಗೆ ಉದ್ಯೋಗ ಸೃಷ್ಠಿ ಹಾಗೂ ಶಿಕ್ಷಕರ ಮತ್ತು ಉಪನ್ಯಾಸಕರ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಶ್ರಮಿಸುತ್ತೇನೆ. ನಿಮ್ಮಗಳ ಪರವಾಗಿ ಅಧಿವೇಶನಗಳಲ್ಲಿ ಧ್ವನಿ ಎತ್ತುತ್ತೇನೆ. ಸದಾ ಕಾಲ ನಿಮ್ಮಗಳ ಪರವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈಗಾಗಲೇ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಸಂಬAಧ ಪಟ್ಟ ಸಚಿವರ ಗಮನಕ್ಕೆ ತಂದಿದ್ದು ಇದನ್ನು ಸಚಿವ ಸಂಪುಟದ ಮುಂದಿಟ್ಟು ಸಮಸ್ಯೆಗೆ ಪರಿಹಾರ ಕಲ್ಪಿಸುವ ಆಶ್ವಾಸನೆ ನೀಡಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಮಾತ್ರ ಸಮಸ್ಯೆಗಳನ್ನು ಅಲಿಸುವುದಲ್ಲ. ಚುನಾವಣೆಯ ನಂತರವು ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ನಿರಂತರವಾಗಿ ನಿಮ್ಮಗಳ ಸಂರ್ಪಕದಲ್ಲಿದ್ದು ಕಾರ್ಯನಿರ್ವಹಿಸುತ್ತೇನೆ. ನಿಮ್ಮಗಳ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜವಾಬ್ದಾರಿಯುತವಾಗಿ ಕೆಲಸವನ್ನು ಮಾಡುವುದಾಗಿ ಆಶ್ವಾಸನೆ ನೀಡಿದರು.
ಪ್ರಮುಖವಾಗಿ ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಸಂಘಟಿತರಾಗ ಬೇಕು. ಯಾವೂದೇ ರೀತಿಯ ವೈಯುಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೆ ಸರಿಸಿ ಚುನಾವಣೆಯಲ್ಲಿ ಒಮ್ಮತದಿಂದ ಕಾರ್ಯನಿರ್ವಹಿಸುವಂತಾಗ ಬೇಕೆಂದು ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್