
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.)
ಅಮರಪುರ ಗ್ರಾಮದ ಬಸ್ ನಿಲ್ದಾಣ ಹತ್ತಿರದ ನಿವಾಸಿಯಾದ ಭೀಮೇಶ ಎಂಬ 16 ವರ್ಷದ ಯುವಕ ಅ.07 ರಂದು ಮನೆಯಿಂದ ಕಾಣೆಯಾಗಿರುವ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿಮಾಡಿದ್ದಾರೆ.
ಯುವಕನ ಚಹರೆ ಗುರುತು:- ಎತ್ತರ 5.8 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಬಲಗೈ ಮೇಲೆ ಡ್ಯಾಡಿ ಮತ್ತು ಅಮ್ಮ ಎಂದು ಇಂಗ್ಲೀಷ್ ನಲ್ಲಿ ಅಚ್ಚೆ ಹಾಕಿಸಿಕೊಂಡಿರುತ್ತಾನೆ. ಮನೆಯಿಂದ ಹೊರಡುವ ಸಂರ್ಧಭದಲ್ಲಿ ಕೆಂಪು ಬಣ್ಣದ ತುಂಬು ತೋಳಿನ ಟೀ-ಶರ್ಟ್ ಹಾಗೂ ನಶೆ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.08392-276461, ಮೊ.9480803049, ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್