ಬೆಂಗಳೂರಿಗೆ ತಂಪೆರೆದ ಮಳೆರಾಯ; ಟ್ರಾಫಿಕ್ ಜಾಮ್ನಿಂದ ಸವಾರರ ಪರದಾಟ
ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್. ಸರ್ಕಲ್ ಸೇರಿದಂತೆ ಹಲವೆಡೆ ಭಾರಿ ಮಳೆ
Bengaluru Evening Heavy Rain Brings Traffic Jams Across City


ಬೆಂಗಳೂರು, 15 ಅಕ್ಟೋಬರ್ (ಹಿ.ಸ.):

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆ ಸುರಿದ ಭಾರಿ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್. ಸರ್ಕಲ್, ವಸಂತನಗರ ಹಾಗೂ ಶಿವಾಜಿನಗರ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೊಂದರೆ ಅನುಭವಿಸಿದರು.

ಸಂಜೆ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯಿಂದಾಗಿ ಸಂಕಷ್ಟ ಎದುರಿಸಬೇಕಾಯಿತು. ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಧಾನಗೊಂಡಿದ್ದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಯಿತು. ಬಿಡುವಿಲ್ಲದ ವಾಹನ ದಟ್ಟಣೆಯ ನಡುವೆ ಮನೆ ಸೇರಲು ವಾಹನ ಸವಾರರು ಪರದಾಡಿದರು.

ದಿಢೀರ್ ಸುರಿದ ಮಳೆಯಿಂದ ರಸ್ತೆಗಳಲ್ಲಿ ನೀರು ನಿಲ್ಲುವ ಆತಂಕವೂ ಎದುರಾಯಿತು. ಪ್ರಮುಖ ರಸ್ತೆಗಳಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಮಳೆಯಲ್ಲಿ ಸಂಚರಿಸಲು ಹರಸಾಹಸಪಟ್ಟರು. ಮಳೆಯ ನಡುವೆಯೇ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಂಚಾರ ಪೊಲೀಸರು ಶ್ರಮಿಸಿದರು.

ಮಳೆ ತಂದ ತಂಪು, ಸಂಚಾರಕ್ಕೆ ಕಿರಿಕಿರಿ

ಹಲವು ದಿನಗಳಿಂದ ಬಿಸಿಲಿನ ವಾತಾವರಣದಿಂದ ಬಳಲುತ್ತಿದ್ದ ನಗರಕ್ಕೆ ಸಂಜೆ ಮಳೆ ತಂಪು ನೀಡಿದರೂ, ವಾಹನ ಸವಾರರಿಗೆ ಮಾತ್ರ ಕಿರಿಕಿರಿ ಉಂಟುಮಾಡಿತು. ನಗರದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಮಳೆ ಮುಂದುವರಿದರೆ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande